Mysore
31
overcast clouds

Social Media

ಬುಧವಾರ, 16 ಸೆಪ್ಟೆಂಬರ್ 2026
Light
Dark

ದಸರಾ ವೆಬ್‌ಸೈಟ್‌ ಲೋಕಾರ್ಪಣೆ : ಅ.11ರಿಂದ 21ರವರೆಗೆ ನಡೆಯಲಿರುವ ಕಾರ್ಯಕ್ರಮಗಳ ಮಾಹಿತಿ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ ಅಧಿಕೃತ ವೆಬ್‌ಸೈಟ್‌ನ್ನು ಲೋಕಾರ್ಪಣೆ ಮಾಡಲಾಯಿತು.

ನಗರದ ಜಿಪಂ ಸಭಾಂಗಣದಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಸಚಿವರಾದ ಡಾ.ಯತೀಂದ್ರ ಸಿದ್ದರಾಮಯ್ಯ, ಶಿವರಾಜ್ ಎಸ್.ತಂಗಡಗಿ ಬಿಡುಗಡೆ ಮಾಡಿದರು. ಜಿಲ್ಲಾಡಳಿತದಿಂದ ಹೊರ ತಂದಿರುವ ಅಧಿಕೃತ ಜಾಲತಾಣದಲ್ಲಿ ಅಕ್ಟೋಬರ್ ೧೧ರಿಂದ ೨೧ರವರೆಗೆ ನಡೆಯಲಿರುವ ಕಾರ್ಯಕ್ರಮಗಳ ಕುರಿತಾಗಿ ಮಾಹಿತಿ ಹೊಂದಿರುತ್ತದೆ. ಮೈಸೂರು ದಸರಾ ಮಹೋತ್ಸವದ ದಸರಾ ಉಪ ಸಮಿತಿಗಳ ಉಪ ವಿಶೇಷಾಧಿಕಾರಿಗಳು, ಕಾರ್ಯಾಧ್ಯಕ್ಷರು, ಕಾರ್ಯದರ್ಶಿಗಳು, ಸಮನ್ವಯಾಧಿಕಾರಿಗಳ ವಿವರಗಳನ್ನು ಹಾಕಲಾಗಿದೆ.

ಆ.೨೮ರಂದು ವೀರನಹೊಸಹಳ್ಳಿಯಿಂದ ಹೊರಟ ಗಜಪಯಣ, ಮೈಸೂರು ಅರಮನೆಗೆ ಸ್ವಾಗತ ಕೋರಿದ ಫೋಟೋಗಳು ಇವೆ. ಅರಮನೆ ಸೇರಿದಂತೆ ಎಂಟು ಕಡೆಗಳಲ್ಲಿ ನಡೆಯುವ ಕಾರ್ಯಕ್ರಮಗಳ ಸ್ಥಳಗಳನ್ನು ನೀಡಲಾಗಿದ್ದು, ಮುಂದೆ ಯಾವ್ಯಾವ ಕಾರ್ಯಕ್ರಮಗಳು ಇರುತ್ತವೆ ಎಂಬ ಮಾಹಿತಿಯನ್ನು ಹೊಂದಿದೆ. ಯುವ ದಸರಾ, ಫಲಫುಷ್ಪ ಪ್ರದರ್ಶನ, ಆಹಾರ ಮೇಳವಲ್ಲದೆ ಇನ್ನಿತರ ವಿಚಾರಗಳು ಇವೆ. ಗೋಲ್ಡ್ ಕಾರ್ಡ್, ಟಿಕೆಟ್ ಮಾರಾಟದ ದಿನಾಂಕವನ್ನು ಪ್ರಕಟಿಸಲಾಗಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿ ಮಂಜುಶ್ರೀ, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಅಧ್ಯಕ್ಷ ರಮೇಶ್ ಬಾಬು ಬಂಡಿಸಿದ್ದೇಗೌಡ, ಗಾಣಿಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಅನಂತು, ಬೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ರಾಮಪ್ಪ, ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ್ ರೆಡ್ಡಿ, ಜಿಪಂ ಸಿಇಒ ಎಸ್.ಯುಕೇಶ್ ಕುಮಾರ್, ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ಡಿಸಿಪಿಗಳಾದ ಡಾ.ಹರ್ಷ ಪ್ರಿಯಂವದಾ, ಕೆ.ಎಸ್.ಸುಂದರರಾಜ್, ನಗರಪಾಲಿಕೆ ಆಯುಕ್ತರಾದ ಎಂ.ಕೆ.ಸವಿತಾ, ಎಂಡಿಎ ಆಯುಕ್ತ ಬಿ.ಆರ್.ಮಹೇಶ್, ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಂ.ಜೆ.ರೂಪಾ, ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕಿ ಎಂ.ಎಸ್.ಅರ್ಚನಾ, ಅಧಿಕ್ಷಕ ಅಭಿಯಂತರ ಸುನಿಲ್ ಕುಮಾರ್, ಪಾಲಿಕೆ ಹೆಚ್ಚುವರಿ ಆಯುಕ್ತರಾದ ಜಿ.ಎಸ್.ಸೋಮಶೇಖರ್, ಬಿ.ಎನ್.ವೀಣಾ, ದಾಸೇಗೌಡ, ಅಧಿಕ್ಷಕ ಅಭಿಯಂತರರಾದ ಕೆ.ಜೆ.ಸಿಂಧು, ಡಿಸಿಎಫ್‌ಗಳಾದ ಡಾ.ಐ.ಬಿ.ಪ್ರಭುಗೌಡ, ಸಿ.ಪರಮೇಶ್, ಉಪ ವಿಭಾಗಾಧಿಕಾರಿ ಆಶಪ್ಪ, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರ ಪದ್ಮನಾಭ, ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ, ಸಿಎಆರ್‌ಡಿಸಿಪಿ ಸಿದ್ದನಗೌಡ ಪಾಟೀಲ್ ಮತ್ತಿತರರು ಹಾಜರಿದ್ದರು.

 

Tags:
error: Content is protected !!