Mysore
26
overcast clouds

Social Media

ಭಾನುವಾರ, 20 ಸೆಪ್ಟೆಂಬರ್ 2026
Light
Dark

ಓದುಗರ ಪತ್ರ: ಯುಪಿಐ ಶುಲ್ಕ: ಚರ್ಚೆಯ ನಂತರ ಕ್ರಮ ಕೈಗೊಳ್ಳಿ

ಓದುಗರ ಪತ್ರ

ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ ಸೂಚಿಸಿ ಇದೀಗ ೨,೦೦೦ ರೂ.ಮೊತ್ತಗಳಿಗೆ ಯಾವುದೇ ಶುಲ್ಕವಿಲ್ಲದೆ ಪಾವತಿಸಿ ಅದಕ್ಕಿಂತ ಹೆಚ್ಚು ಮೊತ್ತವನ್ನು ಪಾವತಿಸಲು ೦.೪% ಎಂಡಿಆರ್ ಶುಲ್ಕ ವಿಧಿಸುವುದಕ್ಕೆ ಮುಂದಾಗಿರುವುದು ಅವೈಜ್ಞಾನಿಕ.

ಜೀವನೋಪಾಯಕ್ಕಾಗಿ ಸಣ್ಣ ಪುಟ್ಟ ವ್ಯಾಪಾರ ನಡೆಸುತ್ತಿರುವವರು, ಅನೇಕ ಸಂದರ್ಭಗಳಲ್ಲಿ ಆಸ್ಪತ್ರೆಗಳಿಗೆ ಭೇಟಿ ನೀಡಿದ ವೇಳೆ ಖರ್ಚು ೨,೦೦೦ ರೂ. ಮೇಲ್ಪಟ್ಟಿರುತ್ತದೆ. ಇಂತಹ ಸಂದರ್ಭದಲ್ಲಿ ಈ ಶುಲ್ಕ ಕಟ್ಟುವುದು ಎಷ್ಟು ಸಮಂಜಸ? ಭಾರತ ದೇಶವು ಸುಮಾರು ೮೦% ಕೃಷಿಕರನ್ನು ಹೊಂದಿರುವ ದೇಶ ಎಂಬುದನ್ನೂ ಮರೆಯಬಾರದು. ಈ ಎಲ್ಲ ವಿಷಯವನ್ನು ಗಮನದಲ್ಲಿಟ್ಟುಕೊಂಡು, ಪ್ರಧಾನಮಂತ್ರಿಗಳು ಮತ್ತು ಕೇಂದ್ರ ಹಣಕಾಸು ಮಂತ್ರಿಗಳು ಕೂಡಲೇ ಎ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಆರ್ಥಿಕ ತಜ್ಞರ ಜೊತೆ ಸಭೆ ನಡೆಸಿ ಜಾರಿಗೆ ತರಲು ಹೊರಟಿರುವ ಎಂಡಿಆರ್ ಶುಲ್ಕದ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳುವುದು ಸೂಕ್ತ.

-ನಾಗೇಶ್, ಮಾನಸಗಂಗೋತ್ರಿ, ಮೈಸೂರು

 

Tags:
error: Content is protected !!