ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ ಕಚೇರಿಗೆ ಅಲೆಯುವುದು ಸರ್ವೇಸಾಮಾನ್ಯವಾದ ಸಂಗತಿಯಾಗಿದೆ. ಜನರಿಗೆ ಅನುಕೂಲವಾಗಲೆಂದು ಪಾಲಿಕೆಯು ಜನನ ಹಾಗೂ ಮರಣ ಪತ್ರಗಳನ್ನು ಮನೆ ಬಾಗಿಲಿಗೆ ತಲುಪಿಸುವ ಸಲುವಾಗಿ ಅಂಚೆ ಇಲಾಖೆ ಯೊಂದಿಗೆ ಒಡಂಬಡಿಕೆ ಮಾಡಿಕೊಳ್ಳಲು ಯೋಜನೆ ರೂಪಿಸ ಲಾಗಿದೆ ಎಂದು ಮೈಸೂರು ಮಹಾ ನಗರ ಪಾಲಿಕೆ ಆಯುಕ್ತೆ ಎಂ. ಕೆ.ಸವಿತಾ ಅವರು ತಿಳಿಸಿರುವುದು ಸ್ವಾಗತಾರ್ಹ. ಇದರಿಂದ ಸಾರ್ವಜನಿಕರಿಗೆ ಹೆಚ್ಚು ಅನುಕೂಲವಾಗುತ್ತದೆ.
-ಬೆಸಗರಹಳ್ಳಿ ರವಿಪ್ರಸಾದ್, ಮೈಸೂರು



