Mysore
28
overcast clouds

Social Media

ಬುಧವಾರ, 23 ಸೆಪ್ಟೆಂಬರ್ 2026
Light
Dark

ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್‌ ರಾಜೀನಾಮೆ

ವಿಜಯಪುರ: ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಸಲ್ಲಿಸಿದ್ದಾರೆ.

ಬರಪೀಡಿತ ತಾಲೂಕುಗಳ ಪಟ್ಟಿಯಿಂದ ಇಂಡಿ ಹಾಗೂ ಚಡಚಣ ತಾಲೂಕುಗಳನ್ನು ಕೈಬಿಟ್ಟಿರುವುದಕ್ಕೆ ಅಸಮಾಧಾನಗೊಂಡಿರುವ ಅವರು, ಈ ನಿರ್ಧಾರ ಕೈಗೊಂಡಿದ್ದಾರೆ.

ತಮ್ಮ ಕ್ಷೇತ್ರದ ಜನರ ಸಮಸ್ಯೆಗಳ ಬಗ್ಗೆ ಹಲವು ಬಾರಿ ಮನವಿ ಮಾಡಿದರೂ ನಿರೀಕ್ಷಿತ ಸ್ಪಂದನೆ ಸಿಗಲಿಲ್ಲ ಎಂದು ಯಶವಂತರಾಯಗೌಡ ಪಾಟೀಲ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ನಮ್ಮ ಮಾತಿಗೆ, ನಮ್ಮ ಭಾವನೆಗಳಿಗೆ ಬೆಲೆ ಇಲ್ಲದಂತಾಗಿದೆ” ಎಂದು ಬೇಸರ ವ್ಯಕ್ತಪಡಿಸಿರುವ ಅವರು, ವಿಧಾನಸಭೆಯ ಸ್ಪೀಕರ್ ಅವರನ್ನು ಭೇಟಿ ಮಾಡಿ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

ಇನ್ನು, ಯಶವಂತರಾಯಗೌಡ ಪಾಟೀಲ್ ಅವರು ಈ ಹಿಂದೆ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಆಗಸ್ಟ್‌ನಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಬಳಿಕ ರಾಜೀನಾಮೆ ಹಿಂಪಡೆದಿದ್ದರು. ಇದೀಗ ಮತ್ತೆ ರಾಜೀನಾಮೆ ಸಲ್ಲಿಸಿದ್ದಾರೆ.

 

Tags:
error: Content is protected !!