Mysore
28
overcast clouds

Social Media

ಬುಧವಾರ, 23 ಸೆಪ್ಟೆಂಬರ್ 2026
Light
Dark

ವಿದ್ಯುತ್ ಸ್ಪರ್ಶ: ಲೈನ್‌ಮ್ಯಾನ್ ಕಾರ್ತಿಕ್‌ ಸ್ಥಿತಿ ಗಂಭೀರ, ಆದರೆ ಸ್ಥಿರ: ವೈದ್ಯರಿಂದ ಮಾಹಿತಿ

ಮೈಸೂರು: ವಿದ್ಯುತ್ ಸ್ಪರ್ಶದಿಂದ ತೀವ್ರವಾಗಿ ಗಾಯಗೊಂಡಿದ್ದ ಲೈನ್‌ಮ್ಯಾನ್ ಕಾರ್ತಿಕ್ ಅವರ ಆರೋಗ್ಯ ಸ್ಥಿತಿ ಗಂಭೀರ, ಆದರೆ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಮೈಸೂರಿನ ಸಿದ್ಧಾರ್ಥನಗರದ ಕಾವೇರಿ ಆಸ್ಪತ್ರೆಯಲ್ಲಿ ಕಾರ್ತಿಕ್ ಅವರಿಗೆ ಚಿಕಿತ್ಸೆ ಮುಂದುವರಿದಿದೆ.

ವಿದ್ಯುತ್ ಶಾಕ್‌ನಿಂದ ದೇಹದ ವಿವಿಧ ಭಾಗಗಳಲ್ಲಿ ಗಂಭೀರ ಸುಟ್ಟಗಾಯಗಳಾಗಿದ್ದು, ಎರಡೂ ಕೈಗಳು, ಹೊಟ್ಟೆ ಹಾಗೂ ಕಾಲುಗಳ ಭಾಗಕ್ಕೆ ತೀವ್ರ ಹಾನಿಯಾಗಿದೆ.

ತುರ್ತು ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರ ತಂಡ, ಶಸ್ತ್ರಚಿಕಿತ್ಸೆ ಮೂಲಕ ಎಡಗೈ ಹಾಗೂ ಬಲಗೈನ ಮಣಿಕಟ್ಟು ತೆರವುಗೊಳಿಸಿದ್ದಾರೆ.

ಹೊಟ್ಟೆಯ ಭಾಗದಲ್ಲಾಗಿರುವ ಗಾಯಗಳಿಗೂ ಅಗತ್ಯ ಚಿಕಿತ್ಸೆ ನೀಡಲಾಗಿದೆ.

ಸದ್ಯ ಕಾರ್ತಿಕ್ ಅವರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ತಜ್ಞ ವೈದ್ಯರ ತಂಡ ನಿರಂತರ ನಿಗಾ ವಹಿಸಿದೆ.

ರೋಗಿಯ ಸ್ಥಿತಿ ಗಂಭೀರವಾಗಿದ್ದರೂ ಸ್ಥಿರವಾಗಿದೆ ಎಂದು ಕಾವೇರಿ ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ.

ಈ ಕುರಿತು ಆರ್ಥೋಪೆಡಿಕ್ ಸರ್ಜನ್ ಡಾ. ಮಂಜುನಾಥ್ ಭಾರ್ಗವ ಅವರು ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿ, ಕಾರ್ತಿಕ್ ಅವರ ಆರೋಗ್ಯ ಸ್ಥಿತಿಯ ಬಗ್ಗೆ ಮಾಹಿತಿ ನೀಡಿದ್ದಾರೆ.

Tags:
error: Content is protected !!