Mysore
28
overcast clouds

Social Media

ಶುಕ್ರವಾರ, 25 ಸೆಪ್ಟೆಂಬರ್ 2026
Light
Dark

2028ಕ್ಕೂ ಡಿಕೆಶಿ ಸಿಎಂ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ: ಸತೀಶ್ ಜಾರಕಿಹೊಳಿ

ಮೈಸೂರು: 2028ರಲ್ಲೂ ಡಿ.ಕೆ. ಶಿವಕುಮಾರ್ ಅವರೇ ಮುಖ್ಯಮಂತ್ರಿಯಾಗಲಿ. ಅವರ ನೇತೃತ್ವದಲ್ಲೇ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿ ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಈ ಹಿಂದೆ ನನಗೆ ಅವಕಾಶ ಸಿಕ್ಕರೆ 2028ಕ್ಕೆ ಸಿಎಂ ಆಗುತ್ತೇನೆ ಎಂದು ಹೇಳಿದ್ದೆ. ಈಗ ಡಿ.ಕೆ. ಶಿವಕುಮಾರ್ ಅವರೇ, ನಾನೇ ಮುಂದೆಯೂ ಸಿಎಂ ಎಂದು ಹೇಳುತ್ತಿದ್ದಾರೆ. ಇದರಿಂದ ನನಗೆ ಸಂತೋಷವಾಗಿದೆ. 2028ಕ್ಕೂ ಅವರೇ ಸಿಎಂ ಆಗಲಿ, ಅವರಿಂದಲೇ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿ ಎಂದು ತಿಳಿಸಿದ್ದಾರೆ.

ನನಗೆ ಇನ್ನೂ ವಯಸ್ಸಿದೆ, ಕಾಯುತ್ತೇನೆ ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಇದೇ ವೇಳೆ ರಾಜ್ಯ ಸರ್ಕಾರದ ಆರ್ಥಿಕ ಪರಿಸ್ಥಿತಿ ಬಗ್ಗೆಯೂ ಮಾತನಾಡಿದ ಅವರು, ಸರ್ಕಾರ ದಿವಾಳಿಯಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಆರ್ಥಿಕ ಇಲಾಖೆ ಸರ್ಕಾರದ ಬೊಕ್ಕಸ ಖಾಲಿಯಾಗಿದೆ ಎಂದು ಹೇಳಿಲ್ಲ. ಬಜೆಟ್‌ನಲ್ಲಿ ಏನು ಘೋಷಣೆ ಮಾಡಿದ್ದೇವೆಯೋ, ಅಷ್ಟಕ್ಕೆ ಮಾತ್ರ ನಮ್ಮ ಬಳಿ ಹಣ ಇದೆ. ಹೊಸ ಘೋಷಣೆಗಳಿಗೆ ಹಣ ಹೊಂದಿಸುವುದು ಕಷ್ಟ ಎಂದು ಆರ್ಥಿಕ ಇಲಾಖೆ ಹೇಳಿದೆ ಎಂದಿದ್ದಾರೆ.

ಇಂತಹ ಸಲಹೆಯನ್ನು ಎಲ್ಲಾ ಸರ್ಕಾರಗಳಿಗೂ ಆರ್ಥಿಕ ಇಲಾಖೆ ನೀಡುತ್ತದೆ. ಹೊಸ ಘೋಷಣೆಗಳನ್ನು ಮಾಡುವಾಗ ಯೋಚನೆ ಮಾಡಿ ಘೋಷಿಸಿ ಎಂದು ಇಲಾಖೆ ಸೂಚಿಸಿದೆ. ಅದನ್ನು ನಾವು ಗಮನದಲ್ಲಿಟ್ಟುಕೊಂಡು ಮುಂದುವರಿಯುತ್ತೇವೆ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

Tags:
error: Content is protected !!