ನವದೆಹಲಿ: ಬ್ಯಾಂಕ್ ಗ್ರಾಹಕರಿಗೆ ಯಾವುದೇ ಆತಂಕ ಬೇಡ. ಇಂದಿನಿಂದ ನಡೆಯಬೇಕಿದ್ದ 3 ದಿನಗಳ ಬ್ಯಾಂಕ್ ಮುಷ್ಕರ ಮುಂದೂಡಿಕೆಯಾಗಿದೆ.
ಬ್ಯಾಂಕ್ ಸೇವೆಗಳಲ್ಲಿ ಯಾವುದೇ ವ್ಯತ್ಯಯ ಇಲ್ಲ ಎಂದು ಸ್ಟೇಟ್ ಬ್ಯಾಂಕ್ ಇಂಡಿಯಾ (SBI) ಮಹತ್ವದ ಪ್ರಕಟಣೆ ಹೊರಡಿಸಿದೆ.
ಭಾನುವಾರ (ಸೆ.27) ರಾತ್ರಿ ಭಾರತೀಯ ಬ್ಯಾಂಕ್‌ಗಳ ಸಂಘ ಮತ್ತು ಬ್ಯಾಂಕ್ ಯೂನಿಯನ್‌ಗಳ ಒಕ್ಕೂಟ ನಡುವೆ ಸಭೆ ನಡೆದಿದ್ದು, ಸಭೆ ಬಳಿಕ ಬ್ಯಾಂಕ್ ಮುಷ್ಕರವನ್ನು ಮುಂದೂಡಲು ನಿರ್ಧರಿಸಲಾಗಿದೆ.
ಹೀಗಾಗಿ, ಇಂದಿನಿಂದ ಎಂದಿನಂತೆ ಬ್ಯಾಂಕ್‌ಗಳ ಸೇವೆಗಳು ಎಲ್ಲರಿಗೂ ಲಭ್ಯವಾಗಲಿವೆ.




