Mysore
30
overcast clouds

Social Media

ಸೋಮವಾರ, 28 ಸೆಪ್ಟೆಂಬರ್ 2026
Light
Dark

ಕಾಡುಹಂದಿ ದಾಳಿ: ರೈತನಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು

ಹನೂರು: ತಾಲ್ಲೂಕಿನ ಪಳನಿಮೇಡ್ ಗ್ರಾಮದಲ್ಲಿ ರೈತನ ಮೇಲೆ ಕಾಡುಹಂದಿ ದಾಳಿ ಮಾಡಿದ್ದು, ರೈತ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಸೋಮವಾರ ಬೆಳಗ್ಗೆ ಬೆಳಕಿಗೆ ಬಂದಿದೆ .

ಪಳನಿಮೇಡು ಗ್ರಾಮದ ಗ್ರಾಮದ ನಿವಾಸಿ ಪರಮೇಶ್ (55) ಅವರು ಸೆ.28 ರ ಸೋಮವಾರ ಬೆಳಗಿನ ಜಾವ 5:45 ರ ಸುಮಾರಿಗೆ ತಮ್ಮ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಕಾಡುಹಂದಿ ಏಕಾಏಕಿ ದಾಳಿ ಮಾಡಿದೆ. ದಾಳಿಯಿಂದ ತೀವ್ರ ಗಾಯಗೊಂಡ ಅವರನ್ನು ಕೂಡಲೇ ಕೊಳ್ಳೇಗಾಲ ತಾಲೂಕಿನ ಖಾಸಗಿ ಜನನಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ವಿಷಯ ತಿಳಿದು ಆಸ್ಪತ್ರೆಗೆ ಭೇಟಿ ನೀಡಿದ ಮೂಲ ಸಿದ್ಧಾಂತದ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಅಮ್ಜದ್ ಖಾನ್, ತಾಲೂಕು ಪ್ರಧಾನ ಕಾರ್ಯದರ್ಶಿ ಕೂಡ್ಲೂರು ವೆಂಕಟೇಶ್ ರೈತನಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದ್ದಾರೆ.

Tags:
error: Content is protected !!