ಕಠ್ಮಂಡು: ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತದ ಆರ್ಭಟ ಮುಂದುವರಿದಿದ್ದು, ಕೇವಲ 8 ಸೆಕೆಂಡ್ಗಳಲ್ಲಿ ಪರ್ವತವೇ ಕುಸಿದು ಬಿದ್ದಿದೆ!
ವಿವಿಧೆಡೆ ಸಂಭವಿಸಿದ ಭಾರೀ ಪ್ರವಾಹ ಹಾಗೂ ಭೂಕುಸಿತಕ್ಕೆ 21 ಮಂದಿ ಸಾವನ್ನಪ್ಪಿದ್ದಾರೆ.
ಇನ್ನು 200ಕ್ಕೂ ಹೆಚ್ಚು ಮನೆಗಳಿಗೆ ಅಪಾಯ ಎದುರಾಗಿದ್ದು, ಪರಿಸ್ಥಿತಿ ಮತ್ತಷ್ಟು ಹದಗೆಟ್ಟ ಹಿನ್ನೆಲೆ ರಾತ್ರೋರಾತ್ರಿ ಸುಮಾರು 1,000 ಮಂದಿಯನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.
ನೇಪಾಳದಲ್ಲಿ ಮತ್ತೆ ಪ್ರಕೃತಿ ವಿಕೋಪದ ಭೀತಿ ಎದುರಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.




