ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ಮೈಸೂರು ದಸರಾ ಮಹೋತ್ಸವ–2026ರ ಆಹ್ವಾನ ಪತ್ರಿಕೆ ನೀಡಿ ಗೌರವಪೂರ್ವಕವಾಗಿ ಆಹ್ವಾನಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಜಿ. ಲಕ್ಷ್ಮಿಕಾಂತ್ ರೆಡ್ಡಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಯುಕೇಶ್ ಕುಮಾರ್, ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಅಪರ ಜಿಲ್ಲಾಧಿಕಾರಿ ಐಶ್ವರ್ಯ ಆರ್. ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.




