ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ.
ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ ಪುಷ್ಪಾರ್ಚನೆ ಮಾಡಲಾಗುವುದು.
ನಂತರ ಮೈಸೂರಿನ ಪುರಭವನದಲ್ಲಿ ಬೆಳಗ್ಗೆ 11 ಗಂಟೆಗೆ ಮಹಿಷ ಮಂಡಲೋತ್ಸವದ ವೇದಿಕೆ ಕಾರ್ಯಕ್ರಮ ನಡೆಯಲಿದೆ.
16 ವರ್ಷಗಳಿಂದ ಮಹಿಷ ಮಂಡಲೋತ್ಸವ ಆಚರಣೆ ಮಾಡುತ್ತಿದ್ದೇವೆ ಎಂದು ಮಾಜಿ ಮೇಯರ್ ಪುರುಷೋತ್ತಮ್ ತಿಳಿಸಿದ್ದಾರೆ.
ಪ್ರತಿ ತಿಂಗಳ ಅಮಾವಾಸ್ಯೆ ಹಾಗೂ ಹುಣ್ಣಿಮೆ ದಿನ ಮಹಿಷ ಪ್ರತಿಮೆಗೆ ಪುಷ್ಪಾರ್ಚನೆ ಮಾಡಲಾಗುತ್ತಿದೆ.
ಮಹಿಷ ಪ್ರತಿಮೆಗೆ ಪುಷ್ಪಾರ್ಚನೆ ಮಾಡಲು ಯಾವುದೇ ಅನುಮತಿ ಪಡೆಯುವುದಿಲ್ಲ ಎಂದಿರುವ ಅವರು, ಯಾರ ಆಚರಣೆಗೂ ವಿರೋಧ ಮಾಡಿಲ್ಲ, ಯಾರಿಗೂ ತೊಂದರೆ ಕೊಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಕಳೆದ ವರ್ಷ ಸಂಸದ ಯದುವೀರ್ ಅವರು ತಮ್ಮ ಆಚರಣೆಗೆ ಸಹಮತ ನೀಡಿದ್ದರು ಎಂದು ತಿಳಿಸಿದ್ದಾರೆ.
ಈ ಬಾರಿಯೂ ಅನಗತ್ಯವಾಗಿ ತೊಂದರೆ ನೀಡಿದರೆ ಕಾನೂನು ಮೂಲಕ ಹೋರಾಟ ಮಾಡುತ್ತೇವೆ ಎಂದು ಮಾಜಿ ಮೇಯರ್ ಪುರುಷೋತ್ತಮ್ ಹೇಳಿದ್ದಾರೆ.




