Mysore
28
broken clouds

Social Media

ಶನಿವಾರ, 03 ಅಕ್ಟೋಬರ್ 2026
Light
Dark

ಮೈಸೂರು | ನಾಲ್ಕೇ ದಿನಕ್ಕೆ ಮುರಿದು ಬಿದ್ದ ದಸರಾ ದೀಪಾಲಂಕಾರ ಕಟೌಟ್

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಕಾಮಗಾರಿಯಲ್ಲೇ ಯಡವಟ್ಟಾಗಿದ್ದು, ನಗರದ ಗನ್ ಹೌಸ್ ವೃತ್ತದಲ್ಲಿ ಕಟ್ಟಲಾಗಿದ್ದ ದಸರಾ ದೀಪಾಲಂಕಾರದ ಕಟೌಟ್‌ ಮುರಿದು ಬಿದ್ದಿದೆ.

ಟಿಟಿ ವಾಹನದ ಮೇಲೆ ವಿದ್ಯುತ್ ದೀಪಾಲಂಕಾರದ ಕಟೌಟ್‌ ಬಿದ್ದಿದ್ದು, ಅದೃಷ್ಟವಶಾತ್‌ ಟಿಟಿ ವಾಹನದ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಘಟನೆಯಿಂದ ಕೆಲಕಾಲ ಗನ್ ಹೌಸ್ ವೃತ್ತದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ದಸರಾ ಆರಂಭಕ್ಕೂ ಮುನ್ನವೇ ದೀಪಾಲಂಕಾರದ ಕಟೌಟ್‌ ಮುರಿದು ಬಿದ್ದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಕೇವಲ ನಾಲ್ಕೇ ದಿನಗಳಲ್ಲಿ ಕಟೌಟ್‌ ಮುರಿದು ಬಿದ್ದಿರುವುದಕ್ಕೆ ಕಳಪೆ ಕಾಮಗಾರಿಯೇ ಕಾರಣವೇ ಎಂಬ ಪ್ರಶ್ನೆ ಇದೀಗ ಮೂಡಿದೆ.

ಘಟನೆ ಸಂಬಂಧ ಅಧಿಕಾರಿಗಳು ಪರಿಶೀಲನೆ ನಡೆಸಿ, ಸುರಕ್ಷತಾ ಕ್ರಮಗಳ ಬಗ್ಗೆ ಗಮನಹರಿಸುವ ಅಗತ್ಯವಿದೆ.

Tags:
error: Content is protected !!