Mysore
31
scattered clouds

Social Media

ಗುರುವಾರ, 08 ಅಕ್ಟೋಬರ್ 2026
Light
Dark

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.

ಪ್ರಕರಣದ 14ನೇ ಆರೋಪಿ ಪ್ರದೋಶ್ ಅಪ್ರೂವರ್ (ಮಾಫಿ ಸಾಕ್ಷಿ) ಆಗಿ ನೀಡಿರುವ ಮಹತ್ವದ ಹೇಳಿಕೆಯನ್ನು ತಡೆಯಲು ದರ್ಶನ್ ಕಡೆಯಿಂದ ನಡೆದ ಕೊನೆಯ ಪ್ರಯತ್ನವೂ ವಿಫಲವಾಗಿದ್ದು, ಸುಪ್ರೀಂ ಕೋರ್ಟ್‌ನಲ್ಲಿ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.

ಈ ಹಿಂದೆ ವಿಚಾರಣಾ ನ್ಯಾಯಾಲಯ ಮತ್ತು ಹೈಕೋರ್ಟ್ ನೀಡಿದ್ದ ಆದೇಶಗಳನ್ನು ಪ್ರಶ್ನಿಸಿ ವಿಜಯಲಕ್ಷ್ಮಿ ಅವರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜೆ.ಬಿ. ಪಾರ್ದಿವಾಲ ನೇತೃತ್ವದ ದ್ವಿ-ಸದಸ್ಯ ಪೀಠವು, ಹೈಕೋರ್ಟ್ ಮತ್ತು ಸೆಷನ್ಸ್ ನ್ಯಾಯಾಲಯದ ನಿಲುವನ್ನು ಎತ್ತಿಹಿಡಿದು, “ಮೇಲ್ನೋಟಕ್ಕೆ ಈ ವಿಷಯದಲ್ಲಿ ಮಧ್ಯಪ್ರವೇಶಿಸುವ ಅಗತ್ಯವಿಲ್ಲ” ಎಂದು ಸ್ಪಷ್ಟಪಡಿಸಿ ಅರ್ಜಿಯನ್ನು ವಜಾಗೊಳಿಸಿತು.

Tags:
error: Content is protected !!