Mysore
30
broken clouds

Social Media

ಗುರುವಾರ, 08 ಅಕ್ಟೋಬರ್ 2026
Light
Dark

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು ಹೊಸದಾಗಿ ಎಸ್‍ಐಆರ್ ಪ್ರಕ್ರಿಯೆ ನಡೆಸುವಂತೆ ಆಗ್ರಹಿಸಿ ಮೊದಲ ಬಾರಿಗೆ ರಾಜ್ಯದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಫ್ರೀಡಂಪಾರ್ಕ್‍ನಲ್ಲಿ ನಡೆದ ಪ್ರತಿಭಟನೆಯಲ್ಲಿ ಎಸ್‌ಐಆರ್‌ನಿಂದ ತೊಂದರೆಗೊಳಗಾದವರು ಹಾಗೂ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾಗಿದೆ ಎಂದು ಹೇಳಿಕೊಳ್ಳುವವರ ಅನುಭವಗಳನ್ನು ಸಾರ್ವಜನಿಕವಾಗಿ ದಾಖಲಿಸುವ ಉದ್ದೇಶವನ್ನು ಸಿಜೆಪಿ ಹೊಂದಿದೆ. ಈ ಹಿನ್ನೆಲೆಯಲ್ಲಿ ಕೆಲವು ವಿಡಿಯೋ ಸಾಕ್ಷ್ಯಗಳು ಮತ್ತು ಪ್ರಕರಣಗಳನ್ನು ಪ್ರದರ್ಶಿಸಲಾಯಿತು.

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿದ ಪ್ರತಿಭಟನಾಕಾರರು ಎಸ್‍ಐಆರ್ ರದ್ದುಗೊಳಿಸಿ) ಮತ್ತು ಜ್ಞಾನೇಶ್ ಕುಮಾರ್ ವಜಾ ಮಾಡಬೇಕು ಎಂಬ ಘೋಷಣೆಗಳನ್ನು ಕೂಗಿದರು.

ಬೆಂಗಳೂರಿನ ಫ್ರೀಡಂಪಾರ್ಕ್‍ನಲ್ಲಿ ಜನತಾ ನ್ಯಾಯಾಲಯ ಹೆಸರಿನಲ್ಲಿ ಪ್ರತಿಭಟನೆ ನಡೆಸಿದ ಸಿಜೆಪಿ ಪ್ರತಿಭಟನಾಕಾರರು, ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ಅವರನ್ನು ವಜಾಗೊಳಿಸಬೇಕು ಹಾಗೂ ಎಸ್‍ಐಆರ್ ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು.

ಸ್ವಾತಂತ್ರ್ಯ ಹೋರಾಟಗಾರರಾದ ಭಗತ್ ಸಿಂಗ್ ಮತ್ತು ಸುಭಾಷ್ ಚಂದ್ರ ಬೋಸ್ ಅವರ ಚಿತ್ರಗಳಿರುವ ಪೋಸ್ಟರ್‌ಗಳನ್ನೂ ಪ್ರತಿಭಟನಾ ಸ್ಥಳದಲ್ಲಿ ಪ್ರದರ್ಶಿಸಲಾಯಿತು. “Grand Theft Democracy” ಎಂಬ ಘೋಷಣೆಯುಳ್ಳ ಪೋಸ್ಟರ್ ಕೂಡ ಗಮನ ಸೆಳೆಯಿತು.

ಫ್ರೀಡಂ ಪಾರ್ಕ್‍ನಲ್ಲಿ ಬೆಳಗ್ಗೆಯಿಂದಲೇ ಸಿಜೆಪಿ ಕಾರ್ಯಕರ್ತರು, ನಾಗರಿಕ ಸಮಾಜ ಸಂಘಟನೆಗಳ ಪ್ರತಿನಿಧಿಗಳು ಹಾಗೂ ಎಸ್‌ಐಆರ್‌ನಿಂದ ಮತದಾರರ ಪಟ್ಟಿಯಲ್ಲಿ ಹೆಸರು ಕಳೆದುಕೊಂಡಿದ್ದೇವೆ ಎಂದು ಹೇಳಿಕೊಂಡ ಹಲವು ನಾಗರಿಕರು ಜಮಾಯಿಸಿದರು.

ಪ್ರತಿಭಟನೆಯಲ್ಲಿ ಸಿಜೆಪಿ ಮುಖಂಡರಾದ ಅಭಿಜಿತ್ ದೀಪ್ಕೆ, ಸೌರವ್ ದಾಸ್, ಅಶುತೋಷ್ ರಾಂಕಾ, ಖ್ಯಾತ ಸಾಹಿತಿ ದೇವನೂರು ಮಹಾದೇವ, ನಟ ಪ್ರಕಾಶ್‍ರಾಜ್, ಕಿಶೋರ್, ಯೂಟ್ಯೂಬರ್ ಧ್ರುವ್ ರಾಠಿ, ಕೃಪಾಕರ್ ಸೇನಾನಿ ಸೇರಿದಂತೆ ಹಲವರು ಭಾಗವಹಿಸಿದ್ದರು.

Tags:
error: Content is protected !!