Mysore
30
broken clouds

Social Media

ಶುಕ್ರವಾರ, 09 ಅಕ್ಟೋಬರ್ 2026
Light
Dark

174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ಗೆ ಇಸ್ರೇಲ್‌ನ ಶೌರ್ಯ ಪ್ರಶಸ್ತಿ!

ಜೆರುಸೇಲಂ: ಭೀಕರ ವಿಮಾನ ಅವಘಡವನ್ನು ತಪ್ಪಿಸಿ 174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರಿಗೆ ಇಸ್ರೇಲ್‌ನಿಂದ ಶೌರ್ಯ ಪ್ರಶಸ್ತಿ ಘೋಷಿಸಲಾಗಿದೆ ಎಂಬ ಸುದ್ದಿ ಗಮನ ಸೆಳೆದಿದೆ.

ಫ್ಲೈದುಬೈ (Flydubai) ವಿಮಾನಕ್ಕೆ ಸಂಬಂಧಿಸಿದ ಅವಘಡದ ಸಂದರ್ಭದಲ್ಲಿ ಸಮಯಪ್ರಜ್ಞೆ ಮತ್ತು ಧೈರ್ಯದಿಂದ ಪ್ರಯಾಣಿಕರ ಜೀವ ಉಳಿಸಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಇವರ ಸಾಹಸವನ್ನು ಗುರುತಿಸಿ, ಇಸ್ರೇಲ್‌ನ ಅತ್ಯುನ್ನತ ಗೌರವಗಳಲ್ಲಿ ಒಂದಾದ ಶೌರ್ಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ತಿಳಿಸಲಾಗಿದೆ.

174 ಪ್ರಯಾಣಿಕರ ಜೀವ ರಕ್ಷಣೆಯಲ್ಲಿ ಭಾರತೀಯ ಪೈಲಟ್‌ನ ಪಾತ್ರಕ್ಕೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಗೌರವ ಸಿಕ್ಕಿರುವುದು ಗಮನಾರ್ಹ.

Tags:
error: Content is protected !!