ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ ನೇತೃತ್ವ ವಹಿಸಲಿದ್ದಾರೆ.
ಅಭಿಜಿತ್ ದೀಪ್ಕೆ, ಸೌರವ್ ದಾಸ್ ಮತ್ತು ಆಶುತೋಷ್ ರಾಂಕಾ ಪೊಲೀಸ್ ವಶದಲ್ಲಿರುವವರೆಗೂ ಪ್ರತಿಭಟನೆ ಮುಂದುವರಿಯಲಿದೆ ಎಂದು ತಿಳಿಸಲಾಗಿದೆ.
ತಮ್ಮ ಬಂಧನವಾಗುವ ಸಾಧ್ಯತೆಯನ್ನು ನಿರೀಕ್ಷಿಸಿದ್ದ ಅಭಿಜಿತ್, ಮುನ್ನೆಚ್ಚರಿಕೆಯಾಗಿ ಶುಕ್ರವಾರ ರಾತ್ರಿಯೇ ವೀಡಿಯೋವೊಂದನ್ನು ರೆಕಾರ್ಡ್ ಮಾಡಿಕೊಂಡಿದ್ದರು.




