Mysore
30
clear sky

Social Media

ಮಂಗಳವಾರ, 13 ಅಕ್ಟೋಬರ್ 2026
Light
Dark

ಓದುಗರ ಪತ್ರ: ಸುಪ್ರೀಂಕೋರ್ಟ್ ಪೀಠಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಬೇಕು

ಓದುಗರ ಪತ್ರ

ಸುಪ್ರೀಂ ಕೋರ್ಟ್ ಬಾಗಿಲು ಭಾರತದ ಪ್ರತಿಯೊಬ್ಬ ನಾಗರಿಕನಿಗೂ ತೆರೆದಿದೆ ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಹೇಳಿದ್ದಾರೆ. ಆದರೆ ದೇಶದ ಉತ್ತರದ ತುದಿಯಲ್ಲಿರುವ ಸುಪ್ರೀಂ ಕೋರ್ಟ್ ಮೆಟ್ಟಿಲು ಹತ್ತಲು ದಕ್ಷಿಣ ಭಾರತದ ಎಷ್ಟು ಮಂದಿಗೆ ಸಾಧ್ಯ ಎನ್ನುವ ಬಗ್ಗೆ ಈಗಾಗಲೇ ಚರ್ಚೆಗಳು ನಡೆದಿವೆ. ದಕ್ಷಿಣ ಭಾರತ ಸೇರಿದಂತೆ ದೇಶದ ಇತರ ಭಾಗಗಳಲ್ಲಿ ಸುಪ್ರೀಂ ಕೋರ್ಟ್ ಪೀಠ ಸ್ಥಾಪಿಸಬೇಕು ಎನ್ನುವ ಬೇಡಿಕೆ ಹೊಸದೇನೂ ಅಲ್ಲ.

ಹಲವು ರಾಜ್ಯಗಳಲ್ಲಿ ಹೈಕೋರ್ಟ್ ಪೀಠ ಸ್ಥಾಪಿಸಿರುವಂತೆ, ಎಲ್ಲ ರಾಜ್ಯಗಳ ರಾಜಧಾನಿಗಳಲ್ಲಿ ಸುಪ್ರೀಂ ಕೋರ್ಟ್ ಪೀಠಗಳನ್ನು ಸ್ಥಾಪಿಸುವುದು ಭಾರತದಂತಹ ವಿಶಾಲ ಹಾಗೂ ಬೃಹತ್ ಜನಸಂಖ್ಯೆಯ ರಾಷ್ಟ್ರದ ಇಂದಿನ ಅಗತ್ಯವಾಗಿದೆ.

ಇಂದಿನ ದುಬಾರಿ ಕೋರ್ಟ್ ಶುಲ್ಕ ಮತ್ತು ದುಬಾರಿ ವಕೀಲರ ಶುಲ್ಕಗಳನ್ನು ಭರಿಸಿ ಎಷ್ಟು ಮಂದಿಗೆ ಸುಪ್ರೀಂ ಕೋರ್ಟ್ ಮೆಟ್ಟಿಲು ಹತ್ತಲು ಸಾಧ್ಯ ಎನ್ನುವ ಬೃಹತ್ ಪ್ರಶ್ನೆಯೂ ಮೂಡುತ್ತದೆ. ಕೇಂದ್ರ ಸರ್ಕಾರ ಹಾಗೂ ಸುಪ್ರೀಂ ಕೋರ್ಟ್ ಈ ಬಗ್ಗೆ ಗಮನ ಹರಿಸಿ ಸಕಾರಾತ್ಮಕ ಕ್ರಮ ಕೈಗೊಂಡರೆ ಸಾಕಷ್ಟು ಅನುಕೂಲವಾಗುತ್ತದೆ.

-ಮುಳ್ಳೂರು ಪ್ರಕಾಶ್, ಮೈಸೂರು

Tags:
error: Content is protected !!