Mysore
28
moderate rain

Social Media

ಶನಿವಾರ, 17 ಅಕ್ಟೋಬರ್ 2026
Light
Dark

ಭಾನುವಾರವಾದರೂ ತಪ್ಪಿಸುವಂತಿಲ್ಲ: ನವೆಂಬರ್‌.1ರಂದು ಶಾಲೆಗಳಲ್ಲಿ ರಾಜ್ಯೋತ್ಸವ ಕಡ್ಡಾಯ

karnataka flag

ಬೆಂಗಳೂರು: ನವೆಂಬರ್‌ 1ರಂದು ಭಾನುವಾರ ಬಂದರೂ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ ಎಂದು ರಾಜ್ಯ ಸರ್ಕಾರ ಸೂಚನೆ ನೀಡಿದೆ.

ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳು ನಿಗದಿತ ದಿನದಂದೇ ರಾಜ್ಯೋತ್ಸವ ಆಚರಿಸಬೇಕು. ರಜಾ ದಿನ ಎಂಬ ಕಾರಣಕ್ಕೆ ಆಚರಣೆಯನ್ನು ತಪ್ಪಿಸುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ನಾಡಹಬ್ಬವಾದ ಕನ್ನಡ ರಾಜ್ಯೋತ್ಸವವನ್ನು ನವೆಂಬರ್‌ 1ರಂದೇ ಆಚರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಆದೇಶ ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನೂ ನೀಡಲಾಗಿದೆ.

Tags:
error: Content is protected !!