Mysore
24
overcast clouds

Social Media

ಮಂಗಳವಾರ, 20 ಅಕ್ಟೋಬರ್ 2026
Light
Dark

ನಾಳೆ ವೈಭವದ ಜಂಬೂಸವಾರಿ: ಚಿನ್ನದ ಅಂಬಾರಿ ಹೊರಲು ಪ್ರಶಾಂತ ಸಜ್ಜು!

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದೆ. ನಾಳೆ ನಡೆಯಲಿರುವ ಈ ವೈಭವದ ಮೆರವಣಿಗೆಯನ್ನು ಕಣ್ತುಂಬಿಕೊಳ್ಳಲು ಲಕ್ಷಾಂತರ ಮಂದಿ ಆಗಮಿಸುವ ನಿರೀಕ್ಷೆಯಿದ್ದು, ಜಿಲ್ಲಾಡಳಿತ ಅಂತಿಮ ಹಂತದ ಸಿದ್ಧತೆಯಲ್ಲಿ ತೊಡಗಿದೆ.

ನಾಳೆ ಮಧ್ಯಾಹ್ನ 1.36ರಿಂದ 1.56ರವರೆಗೆ ನಂದಿಧ್ವಜ ಪೂಜೆ ನೆರವೇರಲಿದೆ. ಬಳಿಕ ಸಂಜೆ 4.10ರಿಂದ 4.35ರವರೆಗೆ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿ ವಿರಾಜಮಾನವಾಗಿರುವ ಚಿನ್ನದ ಅಂಬಾರಿಗೆ ಪುಷ್ಪಾರ್ಚನೆ ಸಲ್ಲಿಸಲಾಗುತ್ತದೆ.

ಈ ಬಾರಿಯ ಜಂಬೂಸವಾರಿಯಲ್ಲಿ ಮೊದಲ ಬಾರಿಗೆ ಪ್ರಶಾಂತ ಆನೆ ಚಿನ್ನದ ಅಂಬಾರಿ ಹೊರಲಿರುವುದು ವಿಶೇಷ ಆಕರ್ಷಣೆಯಾಗಿದೆ. ರಾಜವೈಭವ, ಕಲೆ ಹಾಗೂ ಸಂಸ್ಕೃತಿಯ ಸಂಗಮವಾದ ಜಂಬೂಸವಾರಿಗೆ ಅರಮನೆ ನಗರಿ ಮೈಸೂರು ಸಜ್ಜಾಗಿದೆ.

ಇನ್ನು ಯಾವುದೇ ಅಹಿತಕರ ಘಟನೆ ನಡೆಯದಂತೆ ಎಲ್ಲೆಡೆ ಬಿಗಿ ಪೊಲೀಸ್‌ ಬಂದೋಬಸ್ತ್‌ ವ್ಯವಸ್ಥೆ ಮಾಡಲಾಗಿದ್ದು, ಎಲ್ಲಾ ರಸ್ತೆಗಳಲ್ಲೂ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ.

Tags:
error: Content is protected !!