Mysore
27
light rain

Social Media

ಗುರುವಾರ, 22 ಅಕ್ಟೋಬರ್ 2026
Light
Dark

ಮಾಂಬಳ್ಳಿಯಲ್ಲಿ ಚಿರತೆ ಹೆಜ್ಜೆ ಗುರುತು ಪತ್ತೆ: ಜಮೀನಿಗೆ ತೆರಳಲು ರೈತರ ಆತಂಕ

ಯಳಂದೂರು: ತಾಲ್ಲೂಕಿನ ಮಾಂಬಳ್ಳಿ ಗ್ರಾಮದಲ್ಲಿ ಚಿರತೆಯ ಹೆಜ್ಜೆ ಗುರುತುಗಳು ಪತ್ತೆಯಾಗಿದ್ದು, ರೈತರು ಹಾಗೂ ಕೃಷಿ ಕೂಲಿ ಕಾರ್ಮಿಕರಲ್ಲಿ ಆತಂಕ ಮೂಡಿಸಿದೆ.

ಗ್ರಾಮದ ಚಿಕ್ಕಣ್ಣ ಗೌಡ ಅವರ ಜಮೀನಿನಲ್ಲಿ ಪತ್ತೆಯಾದ ಹೆಜ್ಜೆ ಗುರುತುಗಳಿಂದಾಗಿ, ಈ ಭಾಗದಲ್ಲಿ ಚಿರತೆ ಸಂಚರಿಸಿರುವ ಶಂಕೆ ವ್ಯಕ್ತವಾಗಿದೆ. ಕೃಷಿ ಕೆಲಸಗಳಿಗೆ ಜಮೀನಿಗೆ ತೆರಳಲು ರೈತರು ಹಾಗೂ ಕೂಲಿ ಕಾರ್ಮಿಕರು ಭಯಪಡುತ್ತಿದ್ದು, ಸುರಕ್ಷತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

ಅರಣ್ಯ ಇಲಾಖೆ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ, ಹೆಜ್ಜೆ ಗುರುತುಗಳನ್ನು ಪರಿಶೀಲಿಸಬೇಕು. ಚಿರತೆಯ ಚಲನವಲನದ ಬಗ್ಗೆ ನಿಗಾ ವಹಿಸಿ, ಗ್ರಾಮಸ್ಥರ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಗ್ರಾಮದ ಮಲ್ಲಿಕ್‌, ಆನಂದ್‌, ಚಿಕ್ಕಣ್ಣ ಗೌಡ ಸೇರಿದಂತೆ ಗ್ರಾಮಸ್ಥರು ಅರಣ್ಯ ಇಲಾಖೆಯ ತ್ವರಿತ ಸ್ಪಂದನೆಗೆ ಒತ್ತಾಯಿಸಿದ್ದಾರೆ.

Tags:
error: Content is protected !!