ಬೆಂಗಳೂರು: ಎಸ್‌ಐಆರ್ ಅಂತಿಮ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿಲ್ಲವೇ? ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ.
ನಿರಂತರ ನವೀಕರಣ ವ್ಯವಸ್ಥೆಯಡಿ ಅರ್ಹ ಮತದಾರರು voters.eci.gov.in ವೆಬ್‌ಸೈಟ್‌ನಲ್ಲಿ ಫಾರ್ಮ್ 6 ಭರ್ತಿ ಮಾಡಿ ಅರ್ಜಿ ಸಲ್ಲಿಸಬಹುದು. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಸಾಧ್ಯವಾಗದವರು ತಮ್ಮ ಪ್ರದೇಶದ ಬೂತ್ ಮಟ್ಟದ ಅಧಿಕಾರಿ, ಅಂದರೆ ಬಿಎಲ್‌ಒ ಅವರನ್ನು ಸಂಪರ್ಕಿಸಬಹುದು.
ಅರ್ಜಿಯೊಂದಿಗೆ ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕು. ದಾಖಲೆಗಳ ಪರಿಶೀಲನೆ ಹಾಗೂ ಅರ್ಹತೆ ದೃಢಪಟ್ಟ ಬಳಿಕ ಹೆಸರು ಸೇರ್ಪಡೆ ಮಾಡಲಾಗುತ್ತದೆ. ನಿಮ್ಮ ಹೆಸರು ಪಟ್ಟಿಯಲ್ಲಿದೆಯೇ ಎಂಬುದನ್ನು ಪರಿಶೀಲಿಸಿ, ಅಗತ್ಯವಿದ್ದರೆ ಅರ್ಜಿ ಸಲ್ಲಿಸಿ.




