ಬೆಂಗಳೂರು: ತೀವ್ರ ಬೆನ್ನುನೋವಿನಿಂದ ಬಳಲುತ್ತಿರುವ ನಟ ದರ್ಶನ್, ಜೈಲಿನಲ್ಲೇ ಫಿಸಿಯೋಥೆರಪಿ ಚಿಕಿತ್ಸೆ ಪಡೆಯಲು ಅನುಮತಿ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ದರ್ಶನ್ ಪರ ವಕೀಲರು 58ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ವಿಚಾರಣೆ ವೇಳೆ ದರ್ಶನ್ ತಮ್ಮ ಬೆನ್ನುನೋವಿನ ಸಮಸ್ಯೆಯನ್ನು ನ್ಯಾಯಾಧೀಶರ ಗಮನಕ್ಕೆ ತಂದಿದ್ದರು. ವಕೀಲರ ಮೂಲಕ ಅಧಿಕೃತ ಅರ್ಜಿ ಸಲ್ಲಿಸುವಂತೆ ನ್ಯಾಯಾಲಯ ಸೂಚಿಸಿತ್ತು.
ಕಳೆದ 12 ವರ್ಷಗಳಿಂದ ಬೆನ್ನುನೋವಿನಿಂದ ಬಳಲುತ್ತಿದ್ದು, ಬೆನ್ನುಹುರಿಯ ಎಲ್4–ಎಲ್5 ಭಾಗದಲ್ಲಿ ಸಮಸ್ಯೆ ಇದೆ ಎಂದು ಅರ್ಜಿಯಲ್ಲಿ ತಿಳಿಸಿದ್ದಾರೆ.
ಕಳೆದ ಒಂದು ತಿಂಗಳಿಂದ ನೋವು ತೀವ್ರವಾಗಿದ್ದು, ಕುಳಿತುಕೊಳ್ಳಲು, ನಿಲ್ಲಲು ಹಾಗೂ ರಾತ್ರಿ ಮಲಗಲೂ ತೊಂದರೆಯಾಗುತ್ತಿದೆ ಎಂದು ಹೇಳಿಕೊಂಡಿರುವ ದರ್ಶನ್, ಚಿಕಿತ್ಸೆಗೆ ಅವಕಾಶ ನೀಡುವಂತೆ ಮನವಿ ಮಾಡಿದ್ದಾರೆ.




