ಶಿವಮೊಗ್ಗ: ರಾಜ್ಯೋತ್ಸವ ಪ್ರಶಸ್ತಿ ಘೋಷಣೆಯಾದ ಬೆನ್ನಲ್ಲೇ ಹಿರಿಯ ರಾಜಕಾರಣಿ, ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರಿಗೆ ಡಿ.ಕೆ. ಶಿವಕುಮಾರ್ ವಿಡಿಯೋ ಕರೆ ಮಾಡಿ ಶುಭಾಶಯ ಕೋರಿದ್ದಾರೆ.
ಸಾಗರದಲ್ಲಿರುವ ಕಾಗೋಡು ತಿಮ್ಮಪ್ಪ ಅವರ ನಿವಾಸಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಭೇಟಿ ನೀಡಿ ಅಭಿನಂದಿಸಿದರು. ಇದೇ ಸಂದರ್ಭದಲ್ಲಿ ಡಿಕೆಶಿ ವಿಡಿಯೋ ಕರೆಯಲ್ಲಿ ಮಾತನಾಡಿ, ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ಆಗಮಿಸುವಂತೆ ಆಹ್ವಾನಿಸಿದ್ದಾರೆ.
‘ಹೆಲಿಕಾಪ್ಟರ್ ಕಳುಹಿಸುವೆ, ಕಾರ್ಯಕ್ರಮಕ್ಕೆ ಬನ್ನಿ’ ಎಂದು ಡಿಕೆಶಿ ಹೇಳಿದಾಗ, ಕಾಗೋಡು ತಿಮ್ಮಪ್ಪ ಅವರು ‘ಹೆಲಿಕಾಪ್ಟರ್ ಬೇಡ, ನಾನೇ ಹೇಗೋ ಬರುತ್ತೇನೆ’ ಎಂದು ಪ್ರತಿಕ್ರಿಯಿಸಿದ್ದಾರೆ.




