ಬರ್ಲಿನ್: ಜರ್ಮನಿಯ ಪ್ರಮುಖ ವಾಣಿಜ್ಯ ನಗರ ಫ್ರಾಂಕ್‌ಫರ್ಟ್‌ನಲ್ಲಿ ನಡೆದ ಬೃಹತ್ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ನೀಡಿರುವ ವರದಿಯ ಪ್ರಕಾರ, ದುಷ್ಕರ್ಮಿಗಳು ಅಂಗಡಿ ಮುಂಗಟ್ಟುಗಳನ್ನು ಧ್ವಂಸಗೊಳಿಸಿ, ಹಲವು ಮಳಿಗೆಗಳಲ್ಲಿ ಲೂಟಿ ನಡೆಸಿದ್ದಾರೆ.
ನಗರದ ಕೇಂದ್ರ ಭಾಗದಲ್ಲಿ ನಡೆದ ರ್‍ಯಾಲಿಯಲ್ಲಿ ಸುಮಾರು ಎಂಟರಿಂದ ಒಂಬತ್ತು ಸಾವಿರ ಜನರು ಭಾಗವಹಿಸಿದ್ದರು. ಆರಂಭದಲ್ಲಿ ಶಾಂತಿಯುತವಾಗಿ ನಡೆಯುತ್ತಿದ್ದ ಪ್ರತಿಭಟನೆಯ ಮಧ್ಯೆ, ಸುಮಾರು ಒಂದು ಸಾವಿರದಿಂದ ಒಂದೂವರೆ ಸಾವಿರ ಜನರ ಗುಂಪು ಸಾರ್ವಜನಿಕ ಆಸ್ತಿಪಾಸ್ತಿಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿತು ಎಂದು ವರದಿಯಾಗಿದೆ.
ಪರಿಸ್ಥಿತಿ ನಿಯಂತ್ರಿಸಲು ಮುಂದಾದ ಪೊಲೀಸರ ಮೇಲೂ ದಾಳಿ ನಡೆದಿದ್ದು, ನೂರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಹದಿಹರೆಯದವರು ಸೇರಿದಂತೆ ಒಟ್ಟು 54 ಮಂದಿಯನ್ನು ಬಂಧಿಸಲಾಗಿದೆ ಎಂದು ವರದಿ ತಿಳಿಸಿದೆ.
ಹಿಂಸಾಚಾರದಲ್ಲಿ 17ಕ್ಕೂ ಹೆಚ್ಚು ವಾಣಿಜ್ಯ ಮಳಿಗೆಗಳಿಗೆ ಹಾನಿಯಾಗಿದ್ದು, ಐದು ಅಂಗಡಿಗಳನ್ನು ಸಂಪೂರ್ಣವಾಗಿ ಲೂಟಿ ಮಾಡಲಾಗಿದೆ ಎನ್ನಲಾಗಿದೆ.




