Mysore
29
overcast clouds

Social Media

ಮಂಗಳವಾರ, 03 ನವೆಂಬರ್ 2026
Light
Dark

ಸ್ಕೂಟರ್‌ಗೆ ಸಾರಿಗೆ ಬಸ್ ಡಿಕ್ಕಿ, ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸಾವು

ಮೈಸೂರು: ಅರಮನೆ ಸಮೀಪದ ಚಾಮರಾಜ ವೃತ್ತದ ಬಳಿ ಸ್ಕೂಟರ್‌ಗೆ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ 17 ವರ್ಷದ ವಿದ್ಯಾರ್ಥಿನಿ ವೈಷ್ಣವಿ ಮೃತಪಟ್ಟಿದ್ದಾರೆ. ಟ್ಯೂಷನ್ ಮುಗಿಸಿಕೊಂಡು ತಂದೆಯ ಜೊತೆ ಸ್ಕೂಟರ್‌ನಲ್ಲಿ ತೆರಳುತ್ತಿದ್ದಾಗ ಈ ದುರಂತ ಸಂಭವಿಸಿದೆ.

ಅಶೋಕ ರಸ್ತೆಯಿಂದ ಹರ್ಷ ರಸ್ತೆಗೆ ಸ್ಕೂಟರ್ ತಿರುಗಿಸುವ ವೇಳೆ, ಅಶೋಕ ರಸ್ತೆ ಕಡೆಯಿಂದ ಬಂದ ಬಸ್ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ಪರಿಣಾಮ ತಂದೆ ಎಡಬದಿಗೆ ಬಿದ್ದರೆ, ವೈಷ್ಣವಿ ಬಲಬದಿಗೆ ಬಿದ್ದು ಮೃತಪಟ್ಟಿದ್ದಾರೆ.

ಮೈಸೂರಿನ ಎನ್‌.ಆರ್‌. ಮೊಹಲ್ಲಾ ನಿವಾಸಿಗಳಾದ ವೆಂಕಟೇಶ್ ಮತ್ತು ಜ್ಯೋತಿ ದಂಪತಿಯ ಪುತ್ರಿ ವೈಷ್ಣವಿ, ಸದ್ವಿದ್ಯಾ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದರು. ಈ ಸಂಬಂಧ ದೇವರಾಜ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Tags:
error: Content is protected !!