Mysore
28
light rain

Social Media

ಮಂಗಳವಾರ, 03 ನವೆಂಬರ್ 2026
Light
Dark

ಪರಿಷತ್ ಚುನಾವಣೆ ಸೋಲು | ‘ನನ್ನನ್ನೂ ಸೇರಿ 26 ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಬೇಕು’ ಎಂದ ಕೆ.ಎನ್. ರಾಜಣ್ಣ

ಬೆಂಗಳೂರು: ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅನುಭವಿಸಿದ ಸೋಲಿಗೆ ನೈತಿಕ ಹೊಣೆ ಹೊತ್ತು, ತಮ್ಮನ್ನೂ ಸೇರಿ 26 ಕಾಂಗ್ರೆಸ್ ಶಾಸಕರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಮಾಜಿ ಸಚಿವ ಕೆ.ಎನ್. ರಾಜಣ್ಣ ಹೇಳಿದ್ದಾರೆ

ಪರಿಷತ್ ಚುನಾವಣೆಯ ವ್ಯಾಪ್ತಿಗೆ ಬರುವ 35 ವಿಧಾನಸಭಾ ಕ್ಷೇತ್ರಗಳ ಪೈಕಿ 26ರಲ್ಲಿ ಕಾಂಗ್ರೆಸ್ ಶಾಸಕರಿದ್ದರೂ ಪಕ್ಷ ಸೋತಿರುವುದಕ್ಕೆ ರಾಜಣ್ಣ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಶಾಸಕರು ಹಾಗೂ ತಾಲೂಕು ಮತ್ತು ಹೋಬಳಿ ಮಟ್ಟದ ಮುಖಂಡರು ಚುನಾವಣೆಯಲ್ಲಿ ಸಮರ್ಪಕವಾಗಿ ಕೆಲಸ ಮಾಡದಿರುವುದೇ ಸೋಲಿಗೆ ಪ್ರಮುಖ ಕಾರಣ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಅಕ್ಟೋಬರ್ 23ರಂದು ನಡೆದ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಮೂರು ಸ್ಥಾನಗಳನ್ನು ಗೆದ್ದರೆ, ಜೆಡಿಎಸ್ ಒಂದು ಸ್ಥಾನ ಗಳಿಸಿತ್ತು. ಕಾಂಗ್ರೆಸ್ ನಾಲ್ಕೂ ಕ್ಷೇತ್ರಗಳಲ್ಲಿ ಸೋತಿತ್ತು.

Tags:
error: Content is protected !!