Mysore
26
moderate rain

Social Media

ಮಂಗಳವಾರ, 03 ನವೆಂಬರ್ 2026
Light
Dark

ಹಿರಿಯೂರಿನಲ್ಲಿ ₹2,328 ಕೋಟಿ ಕಾಮಗಾರಿಗಳಿಗೆ ಶಂಕುಸ್ಥಾಪನೆ | ‘ನುಡಿದಂತೆ ನಡೆಯುತ್ತೇನೆ’ ಎಂದ ಡಿಕೆಶಿ

D K Shivakumar

ಚಿತ್ರದುರ್ಗ:  ‘ನಾನು ಬರೀ ಖಾಲಿ ಮಾತನಾಡುವ ಗಿರಾಕಿ ಅಲ್ಲ. ರಾಜ್ಯದ ಪ್ರಜಾ ಸೇವಕನಾಗಿ ನುಡಿದಂತೆ ನಡೆಯುತ್ತೇನೆ’ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನಲ್ಲಿ ₹2,328 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದಾಗ ವಿರೋಧ ಪಕ್ಷದವರು ನಕ್ಕಿದ್ದರು. ಆದರೆ ನಮ್ಮ ಸರ್ಕಾರ ಅವುಗಳನ್ನು ಜಾರಿಗೆ ತಂದಿದೆ. ಮಹಿಳೆಯರು ಉಚಿತವಾಗಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಾರೆ. ಐದು ಕೆಜಿ ಅಕ್ಕಿ ಹಾಗೂ ಇನ್ನೂ ಐದು ಕೆಜಿ ಅಕ್ಕಿಗೆ ಸಮಾನವಾದ ಹಣ ನೀಡುತ್ತಿದ್ದೇವೆ ಎಂದು ಶಿವಕುಮಾರ್ ಹೇಳಿದರು.

‘ನನಗೆ ಕನಕಪುರ ಎಷ್ಟು ಮುಖ್ಯವೋ, ಹಿರಿಯೂರು ಕ್ಷೇತ್ರವೂ ಅಷ್ಟೇ ಮುಖ್ಯ. ಅಭಿವೃದ್ಧಿಗೆ ಎಷ್ಟು ಹಣ ಬೇಕಾದರೂ ಖರ್ಚು ಮಾಡುತ್ತೇವೆ’ ಎಂದ ಅವರು, ಪ್ರತಿ ಊರಿಗೂ ಬೇಕಾದ ಕಾಮಗಾರಿಗಳ ಪಟ್ಟಿ ಸಿದ್ಧಪಡಿಸಿ ಕೆಲಸ ಆರಂಭಿಸಿದ್ದೇವೆ ಎಂದು ತಿಳಿಸಿದರು.

ಇದೇ ವೇಳೆ ಡಿ. ಸುಧಾಕರ್ ಅವರನ್ನು ಸ್ಮರಿಸಿದ ಶಿವಕುಮಾರ್, ‘ಅವರು ಇಂದು ಇದ್ದಿದ್ದರೆ ಈ ಅಭಿವೃದ್ಧಿ ಕಾಮಗಾರಿಗಳನ್ನು ನೋಡಿ ಸಂತೋಷಪಡುತ್ತಿದ್ದರು’ ಎಂದರು. ಹಿರಿಯೂರು ಉಪಚುನಾವಣೆಯಲ್ಲಿ ಮೈತ್ರಿ ಪಕ್ಷಗಳು ಒಬ್ಬರನ್ನೇ ಕಣಕ್ಕಿಳಿಸುವ ನಿರೀಕ್ಷೆಯಿದೆ ಎಂದ ಅವರು, ಮುಂದಿನ ಬಾರಿಯೂ ಕಾಂಗ್ರೆಸ್ ಸರ್ಕಾರವೇ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Tags:
error: Content is protected !!