Mysore
29
light rain

Social Media

ಬುಧವಾರ, 04 ನವೆಂಬರ್ 2026
Light
Dark

ಮಧ್ಯರಾತ್ರಿಯಿಂದ ಬಸ್ ದರ ಏರಿಕೆ!

big shocking for ksrtc transport unions

ಬೆಂಗಳೂರು: ಹಾಲು, ಮೊಸರಿನ ಬೆಲೆ ಏರಿಕೆ ಬೆನ್ನಲ್ಲೇ ರಾಜ್ಯದ ಬಸ್ ಪ್ರಯಾಣಿಕರಿಗೂ ದರ ಏರಿಕೆಯ ಬಿಸಿ ತಟ್ಟಿದೆ. ನವೆಂಬರ್ 4ರ ಮಧ್ಯರಾತ್ರಿಯಿಂದ ಹೊಸ ಬಸ್ ಪ್ರಯಾಣ ದರ ಜಾರಿಗೆ ಬರಲಿದೆ.

ಕೆಎಸ್‌ಆರ್‌ಟಿಸಿ ಬಸ್ ಪ್ರಯಾಣ ದರ ಗರಿಷ್ಠ 9 ರೂಪಾಯಿ ಏರಿಕೆಯಾಗಲಿದೆ. ಬೆಂಗಳೂರಿನಲ್ಲಿ ಬಿಎಂಟಿಸಿಯ ಪ್ರತಿ ಸ್ಟೇಜ್‌ನ ದರ 6 ರೂಪಾಯಿಯಿಂದ 10 ರೂಪಾಯಿಗೆ ಹೆಚ್ಚಲಿದೆ. ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಸಾರಿಗೆ ಸಚಿವ ಭೈರತಿ ಸುರೇಶ್ ಹೊಸ ದರವನ್ನು ಪ್ರಕಟಿಸಿದ್ದಾರೆ.

ಡೀಸೆಲ್ ಬೆಲೆ ಮತ್ತು ಬಸ್‌ಗಳ ನಿರ್ವಹಣಾ ವೆಚ್ಚ ಹೆಚ್ಚಿರುವುದರಿಂದ ಸಾರಿಗೆ ನಿಗಮಗಳ ಮೇಲಿನ ಹೊರೆ ಹೆಚ್ಚಾಗಿದೆ. ಹೀಗಾಗಿ ದರ ಏರಿಕೆ ಅನಿವಾರ್ಯವಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಮಹಿಳೆಯರ ಉಚಿತ ಬಸ್ ಪ್ರಯಾಣದ ಟಿಕೆಟ್ ವೆಚ್ಚವನ್ನು ಸರ್ಕಾರವೇ ಭರಿಸುತ್ತಿದೆ. ಉಚಿತ ಪ್ರಯಾಣದಿಂದ ಸಾರಿಗೆ ನಿಗಮಗಳಿಗೆ ನಷ್ಟವಾಗುತ್ತಿಲ್ಲ ಎಂದೂ ಸಚಿವರು ಹೇಳಿದ್ದಾರೆ.

Tags:
error: Content is protected !!