Mysore
28
scattered clouds

Social Media

ಗುರುವಾರ, 05 ನವೆಂಬರ್ 2026
Light
Dark

ಓದುಗರ ಪತ್ರ: ಎಫ್‌ಡಿಎ ಮತ್ತು ಎಸ್‌ಡಿಎ ಪರೀಕ್ಷಾ ವೇಳಾಪಟ್ಟಿ ಬದಲಿಸಿ

ಓದುಗರ ಪತ್ರ

ಪ್ರಥಮ ದರ್ಜೆ ಹಾಗೂ ದ್ವಿತೀಯ ದರ್ಜೆ ಸಹಾಯಕ ಸೇರಿದಂತೆ ಒಟ್ಟಾರೆ ಐದು ಸಾವಿರಕ್ಕೂ ಅಧಿಕ ಹುದ್ದೆಗಳ ನೇಮಕಾತಿ ಪರೀಕ್ಷೆ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ)ಇತ್ತೀಚಿಗೆ ಅಧಿಸೂಚನೆ ಹೊರಡಿಸಿದ್ದು, ಜನವರಿ ತಿಂಗಳಿನಲ್ಲಿ ಪರೀಕ್ಷೆಯನ್ನು ನಿಗದಿಪಡಿಸಿದೆ.

ಆದರೆ ಪರೀಕ್ಷೆಗೆ ಕಾಲಾವಕಾಶ ಕಡಿಮೆ ಇರುವುದರಿಂದ ಅರೆಕಾಲಿಕ ಹುದ್ದೆ ಯಲ್ಲಿ ಕಾರ್ಯ ನಿರ್ವಹಿಸುತ್ತಾ ಪರೀಕ್ಷೆಗೆ ಸಿದ್ಧತೆ ನಡೆಸುವವರಿಗೆ ಇದರಿಂದ ತೊಂದರೆಯಾಗಲಿದೆ.

ಕೇಂದ್ರ ಸರ್ಕಾರ ಹುದ್ದೆಗಳಿಗೆ ನೇಮಕಾತಿ ಪರೀಕ್ಷೆಗೆ ಅಧಿಸೂಚನೆ ಹೊರಡಿಸಿದ ನಂತರ ೫ ತಿಂಗಳುಗಳ ಕಾಲಾವಕಾಶ ನೀಡಲಾಗುತ್ತದೆ. ಇದೇ ಮಾದರಿಯಲ್ಲಿ ಕೆಇಎ ಪರೀಕ್ಷಾ ದಿನಾಂಕವನ್ನು ಮುಂದೂಡುವ ಮೂಲಕ ಪರೀಕ್ಷೆಗೆ ಸಿದ್ಧತೆ ನಡೆಸುವವರಿಗೆ ಅನುಕೂಲ ಕಲ್ಪಿಸಬೇಕಾಗಿದೆ.

– ಅನಿಲ್ ಕುಮಾರ್, ನಂಜನಗೂಡು

 

Tags:
error: Content is protected !!