ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡಲಾಗುತ್ತಿದೆ ಎನ್ನಲಾದ ವಿಡಿಯೋ ವೈರಲ್ ಪ್ರಕರಣದಲ್ಲಿ ನಟ ಧನ್ವೀರ್ಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ ಎಂದು ವರದಿಯಾಗಿದೆ.
ವಿಡಿಯೋ ಹಂಚಿಕೆಯಲ್ಲಿ ಧನ್ವೀರ್ ಅವರ ಮೊಬೈಲ್ ಬಳಕೆಯಾಗಿರುವುದಕ್ಕೆ ಸಾಕ್ಷ್ಯ ಲಭ್ಯವಾಗಿದೆ ಎಂದು ಪಬ್ಲಿಕ್ ಟಿವಿ ವರದಿ ತಿಳಿಸಿದೆ. ಮೊಬೈಲ್ನಿಂದ ಅಳಿಸಲಾದ ಡೇಟಾವನ್ನು ಮರುಪಡೆದ ವರದಿ ಇದೀಗ ಸಿಸಿಬಿ ಪೊಲೀಸರ ಕೈ ಸೇರಿದೆ ಎನ್ನಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಈ ಹಿಂದೆ ಧನ್ವೀರ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಅವರ ಮೊಬೈಲ್ ಪರಿಶೀಲಿಸಿದಾಗ ವಿಡಿಯೋಗಳು ಪತ್ತೆಯಾಗದ ಹಿನ್ನೆಲೆಯಲ್ಲಿ, ಅಳಿಸಲಾದ ಮಾಹಿತಿಯನ್ನು ಮರುಪಡೆಯಲು ಫೋನ್ ಅನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು.
ಇದೀಗ ದೊರೆತಿರುವ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿ, ಬಂಧನ ವಾರಂಟ್ ಪಡೆಯಲು ಪೊಲೀಸರು ಮುಂದಾಗಿದ್ದಾರೆ ಎಂದು ಸುದ್ದಿಯಲ್ಲಿ ತಿಳಿಸಲಾಗಿದೆ.
ಜೈಲಿನೊಳಗೆ ಕೈದಿಗಳು ಮೊಬೈಲ್ ಬಳಸುತ್ತಿರುವ ವಿಡಿಯೋ ವೈರಲ್ ಆದ ಬಳಿಕ ಸಿಸಿಬಿ ಈ ಕುರಿತು ತನಿಖೆ ಆರಂಭಿಸಿತ್ತು. ಪ್ರಕರಣದಲ್ಲಿ ಧನ್ವೀರ್ ವಿರುದ್ಧದ ಆರೋಪಗಳ ಕುರಿತು ತನಿಖೆ ಮುಂದುವರಿದಿದೆ.




