Mysore
29
light rain

Social Media

ಗುರುವಾರ, 05 ನವೆಂಬರ್ 2026
Light
Dark

ನವೆಂಬರ್‌ನಲ್ಲೇ 99 ಅಡಿಗೆ ಇಳಿದ ಕೆಆರ್‌ಎಸ್‌ — ಬೇಸಿಗೆಗೂ ಮುನ್ನ ನೀರಿನ ಕೊರತೆಯ ಆತಂಕ!

krs damm

ಮಂಡ್ಯ: ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ ನವೆಂಬರ್‌ನಲ್ಲೇ 99 ಅಡಿಗೆ ಇಳಿದಿದ್ದು, ಮುಂದಿನ ಬೇಸಿಗೆಯಲ್ಲಿ ಕುಡಿಯುವ ನೀರಿನ ಕೊರತೆ ಎದುರಾಗುವ ಆತಂಕ ಮೂಡಿದೆ.

ಕಳೆದ ವಾರ 104 ಅಡಿಯಷ್ಟಿದ್ದ ನೀರಿನ ಮಟ್ಟ, ಒಂದೇ ವಾರದಲ್ಲಿ ಐದು ಅಡಿ ಕುಸಿದಿದೆ ಎಂದು ವರದಿಯಾಗಿದೆ. ಜಲಾಶಯದ ಗರಿಷ್ಠ ನೀರಿನ ಮಟ್ಟ 124.80 ಅಡಿ.

ಪ್ರಸ್ತುತ ಡ್ಯಾಂನಲ್ಲಿ ಒಟ್ಟು 22 ಟಿಎಂಸಿ ನೀರು ಸಂಗ್ರಹವಾಗಿದೆ. ಇದರಲ್ಲಿ ಆರು ಟಿಎಂಸಿ ಡೆಡ್‌ ಸ್ಟೋರೇಜ್‌ ಆಗಿದ್ದು, ಬಳಕೆಗೆ ಲಭ್ಯವಿರುವುದು 16 ಟಿಎಂಸಿ ನೀರು ಮಾತ್ರ ಎಂದು ವರದಿ ತಿಳಿಸಿದೆ.

ಜಲಾಶಯದಿಂದ ನದಿ ಹಾಗೂ ನಾಲೆಗಳಿಗೆ ಒಟ್ಟು 7,884 ಕ್ಯೂಸೆಕ್‌ ನೀರನ್ನು ಹೊರಬಿಡಲಾಗುತ್ತಿದೆ. ಇದರಲ್ಲಿ ಮೂರು ಸಾವಿರ ಕ್ಯೂಸೆಕ್‌ ನೀರು ತಮಿಳುನಾಡಿಗೆ ಹರಿಯುತ್ತಿರುವುದಾಗಿ ತಿಳಿಸಲಾಗಿದೆ.

ನೀರಿನ ಸಂಗ್ರಹ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿಯನ್ನು ಅವಲಂಬಿಸಿರುವ ಬೆಂಗಳೂರು, ಮೈಸೂರು ಹಾಗೂ ಮಂಡ್ಯದಲ್ಲಿ ಬೇಸಿಗೆ ವೇಳೆ ಕುಡಿಯುವ ನೀರಿನ ಪೂರೈಕೆ ಬಗ್ಗೆ ಆತಂಕ ವ್ಯಕ್ತವಾಗಿದೆ.

Tags:
error: Content is protected !!