Mysore
28
overcast clouds

Social Media

ಶನಿವಾರ, 07 ನವೆಂಬರ್ 2026
Light
Dark

ನವೆಂಬರ್.‌13ರಂದು ಕರ್ನಾಟಕಕ್ಕೆ ಪ್ರಧಾನಿ ಮೋದಿ ಭೇಟಿ

ಬೆಂಗಳೂರು: ನವೆಂಬರ್‌ 13ರಂದು ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ. ಬೆಂಗಳೂರು ಮತ್ತು ಮೈಸೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಮಧ್ಯಾಹ್ನ 12 ಗಂಟೆ 45 ನಿಮಿಷಕ್ಕೆ ನಮ್ಮ ಮೆಟ್ರೋದ ಪಿಂಕ್ ಲೈನ್‌ಗೆ ಹಸಿರು ನಿಶಾನೆ ತೋರಲಿದ್ದಾರೆ. ಮೊದಲ ಹಂತದಲ್ಲಿ ಕಾಳೇನ ಅಗ್ರಹಾರದಿಂದ ತಾವರೆಕೆರೆವರೆಗಿನ ಆರು ನಿಲ್ದಾಣಗಳು ಕಾರ್ಯಾರಂಭ ಮಾಡಲಿವೆ. ಬಳಿಕ ತಾವರೆಕೆರೆಯಿಂದ ಐಐಎಂಬಿ ನಿಲ್ದಾಣದವರೆಗೆ ಮೋದಿ ಮೆಟ್ರೋದಲ್ಲಿ ಪ್ರಯಾಣಿಸಲಿದ್ದಾರೆ.

ಮಧ್ಯಾಹ್ನ 1 ಗಂಟೆ 15 ನಿಮಿಷಕ್ಕೆ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ನಂತರ 2 ಗಂಟೆ 30 ನಿಮಿಷಕ್ಕೆ ಬೆಂಗಳೂರಿನಿಂದ ಮೈಸೂರಿಗೆ ಪ್ರಯಾಣಿಸಲಿದ್ದಾರೆ.

ಮಧ್ಯಾಹ್ನ 3 ಗಂಟೆ 30 ನಿಮಿಷಕ್ಕೆ ಮೈಸೂರಿನಲ್ಲಿ ಭಾರತ್ ವ್ಯಾನ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸಂಜೆ 4 ಗಂಟೆಗೆ 91 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಅತ್ಯಾಧುನಿಕ ಟಿಲ್ಟೆಡ್ ಎಲ್‌ಇಡಿ ಡೋಮ್ ಹೊಂದಿರುವ ಕಾಸ್ಮೋಸ್ ತಾರಾಲಯವನ್ನು ಉದ್ಘಾಟಿಸಲಿದ್ದಾರೆ.

ಕಾರ್ಯಕ್ರಮಗಳ ಬಳಿಕ ಸಂಜೆ 6 ಗಂಟೆ 5 ನಿಮಿಷಕ್ಕೆ ಮೈಸೂರಿನಿಂದ ನವದೆಹಲಿಗೆ ನಿರ್ಗಮಿಸಲಿದ್ದಾರೆ.

Tags:
error: Content is protected !!