Mysore
28
overcast clouds

Social Media

ಶನಿವಾರ, 07 ನವೆಂಬರ್ 2026
Light
Dark

ಮಲೆ ಮಹದೇಶ್ವರ ಬೆಟ್ಟಕ್ಕೆ ರಾತ್ರಿ ಪಾದಯಾತ್ರೆ ನಿಷೇಧ: ನ.11ರವರೆಗೆ ನಿರ್ಬಂಧ!

ಹನೂರು: ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಕೈಗೊಳ್ಳುವ ಭಕ್ತರ ಗಮನಕ್ಕೆ! ದೀಪಾವಳಿ ಜಾತ್ರೆಯ ಹಿನ್ನೆಲೆಯಲ್ಲಿ ನವೆಂಬರ್‌ 11ರವರೆಗೆ ರಾತ್ರಿ ವೇಳೆ ಕಾಲ್ನಡಿಗೆ ಹಾಗೂ ಪಾದಯಾತ್ರೆಯನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ.

ತಾಳಬೆಟ್ಟದಿಂದ ಮಹದೇಶ್ವರ ಬೆಟ್ಟಕ್ಕೆ ತೆರಳುವ ಮಾರ್ಗದಲ್ಲಿ ಪ್ರತಿದಿನ ಸಂಜೆ ಆರು ಗಂಟೆಯಿಂದ ಮರುದಿನ ಬೆಳಿಗ್ಗೆ ಏಳು ಗಂಟೆಯವರೆಗೆ ಈ ನಿರ್ಬಂಧ ಅನ್ವಯವಾಗಲಿದೆ.

ಜಾತ್ರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವುದರಿಂದ, ಅರಣ್ಯ ಪ್ರದೇಶದಲ್ಲಿ ಕಾಡುಪ್ರಾಣಿಗಳ ದಾಳಿ ಹಾಗೂ ಅನಾಹುತಗಳನ್ನು ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ ಜಿಲ್ಲಾಧಿಕಾರಿ ಶ್ರೀರೂಪ ಅವರು ಆದೇಶ ಹೊರಡಿಸಿದ್ದಾರೆ.

Tags:
error: Content is protected !!