ನವದೆಹಲಿ: ಕರ್ನಾಟಕ ಸೇರಿದಂತೆ ದಕ್ಷಿಣದ ಐದು ರಾಜ್ಯಗಳಿಗೆ ಹೆಚ್ಚುವರಿ ಭಾರತ್ ರೈಸ್ ಹಂಚಿಕೆ ಮಾಡಲಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ.
ಅಕ್ಕಿಯ ಪೂರೈಕೆ ಹೆಚ್ಚಿಸಿ, ಬೆಲೆ ಸ್ಥಿರತೆ ಕಾಯ್ದುಕೊಳ್ಳುವುದು ಹಾಗೂ ಅಕ್ರಮ ದಾಸ್ತಾನು ತಡೆಯುವುದು ಈ ಕ್ರಮದ ಉದ್ದೇಶವಾಗಿದೆ.
ಮುಕ್ತ ಮಾರುಕಟ್ಟೆ ಮಾರಾಟ ಯೋಜನೆಯಡಿ ಅಕ್ಕಿ ಮಾರಾಟದ ಗುರಿಯನ್ನು 50 ಲಕ್ಷ ಮೆಟ್ರಿಕ್ ಟನ್ಗೆ ಹೆಚ್ಚಿಸಲಾಗಿದೆ.
ಜೊತೆಗೆ, ಅಗತ್ಯವಿರುವ ಕಡೆ ಅಕ್ಕಿ ಮತ್ತು ಭತ್ತದ ದಾಸ್ತಾನಿಗೆ ಮಿತಿ ವಿಧಿಸಲು ರಾಜ್ಯಗಳಿಗೆ ಅನುಮತಿ ನೀಡಲಾಗಿದೆ. ಈ ಅನುಮತಿ 2027ರ ಜನವರಿ 31ರವರೆಗೆ ಅನ್ವಯವಾಗಲಿದೆ ಎಂದು ಜೋಶಿ ಮಾಹಿತಿ ನೀಡಿದ್ದಾರೆ.
ಗ್ರಾಹಕರಿಗೆ ಸಮಂಜಸ ಬೆಲೆಯಲ್ಲಿ ಅಕ್ಕಿ ಲಭ್ಯವಾಗುವಂತೆ ಮಾಡಲು ಹಾಗೂ ಕಪ್ಪು ಮಾರುಕಟ್ಟೆ ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.




