Mysore
28
overcast clouds

Social Media

ಸೋಮವಾರ, 09 ನವೆಂಬರ್ 2026
Light
Dark

ನ.13ಕ್ಕೆ ಪ್ರಧಾನಿ ಮೋದಿ ಮೈಸೂರು ಭೇಟಿ, ಚಾಮುಂಡಿಬೆಟ್ಟದ ತಪ್ಪಲಿನ ತಾರಾಲಯ ಉದ್ಘಾಟನೆ: ಸಂಸದ ಯದುವೀರ್‌ ಒಡೆಯರ್‌ ಮಾಹಿತಿ

ಮೈಸೂರು: ನವೆಂಬರ್ 13ರಂದು ಪ್ರಧಾನಿ ನರೇಂದ್ರ ಮೋದಿ ಮೈಸೂರಿಗೆ ಭೇಟಿ ನೀಡಲಿದ್ದಾರೆ. ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ನಿರ್ಮಿಸಿರುವ ನೂತನ ತಾರಾಲಯವನ್ನು ಅವರು ಉದ್ಘಾಟಿಸಲಿದ್ದಾರೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ.

ಮೈಸೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ತಾರಾಲಯಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅನುದಾನ ನೀಡಿದ್ದಾರೆ. ಇಲ್ಲಿ ವಿದ್ಯಾರ್ಥಿಗಳಿಗೆ ತರಬೇತಿ ಪಡೆಯಲು ಅನುಕೂಲವಾಗಲಿದೆ ಎಂದರು.

ರಾಜ್ಯ ಸರ್ಕಾರ ಮತ್ತು ರಾಜಮನೆತನದ ನಡುವಿನ ವಿವಾದದ ಬಗ್ಗೆ ಪ್ರತಿಕ್ರಿಯಿಸಿದ ಯದುವೀರ್, ಈ ವಿಚಾರ ನ್ಯಾಯಾಲಯದ ಮುಂದಿದ್ದು, ಕಾನೂನಿನ ಮೂಲಕವೇ ಬಗೆಹರಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಮೈಸೂರು ಅರಮನೆಯನ್ನು ಸರ್ಕಾರದ ವಶಕ್ಕೆ ಪಡೆಯಲು ಕಾರ್ಯಾಂಗವನ್ನು ದುರ್ಬಳಕೆ ಮಾಡುವ ಯತ್ನ ನಡೆದಿದೆ ಎಂದೂ ಆರೋಪಿಸಿದರು.

ಈ ಬಾರಿಯ ದಸರಾ ಲೋಪಗಳನ್ನು ಮುಂದಿನ ದಸರೆಯಲ್ಲಿ ಸರಿಪಡಿಸಿಕೊಳ್ಳಬೇಕು ಎಂದ ಅವರು, ಅರಮನೆ ಆವರಣದ ಭದ್ರತೆಯನ್ನು ಹೊರಗಿನವರಿಗೆ ವಹಿಸಿದ್ದರಿಂದ ಜೆಟ್ಟಿಕಾಳಗಕ್ಕೆ ಅಡಚಣೆಯಾಯಿತು ಎಂದು ಹೇಳಿದರು.

ಇದೇ ವೇಳೆ ಎಥೆನಾಲ್ ವಿವಾದದ ಬಗ್ಗೆಯೂ ಮಾತನಾಡಿದ ಯದುವೀರ್, ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನರ ಗಮನ ಬೇರೆಡೆ ಸೆಳೆಯಲು ಈ ವಿಚಾರವನ್ನು ಮುನ್ನೆಲೆಗೆ ತರಲಾಗಿದೆ ಎಂದು ಆರೋಪಿಸಿದರು. ಎಥೆನಾಲ್ ಮಿಶ್ರಣದಿಂದ ವಾಹನಗಳ ಕಾರ್ಯಕ್ಷಮತೆ ಕುಸಿಯುತ್ತದೆ ಎಂಬ ಆರೋಪಕ್ಕೆ ದಾಖಲೆ ನೀಡುವಂತೆ ಒತ್ತಾಯಿಸಿದರು.

Tags:
error: Content is protected !!