ದಾವಣಗೆರೆ: ಕರ್ನಾಟಕದಲ್ಲಿ ಚಳಿಯ ಅನುಭವ ಹೆಚ್ಚುತ್ತಿದೆ. ದಾವಣಗೆರೆಯಲ್ಲಿ ಕನಿಷ್ಠ ತಾಪಮಾನ 10.3 ಡಿಗ್ರಿ ಸೆಲ್ಸಿಯಸ್ಗೆ ಇಳಿದಿದ್ದು, ರಾಜ್ಯದ ಬಯಲು ಪ್ರದೇಶಗಳಲ್ಲೇ ಅತಿ ಕಡಿಮೆ ತಾಪಮಾನ ದಾಖಲಾಗಿದೆ.
ಹವಾಮಾನ ಇಲಾಖೆಯ ಮುನ್ಸೂಚನೆಯಂತೆ, ನವೆಂಬರ್ 13 ಮತ್ತು 14ರಂದು ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆಯಿದೆ.
ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಒಣಹವೆ ಇರಲಿದ್ದು, ಬೆಂಗಳೂರು, ಮೈಸೂರು, ಮಂಡ್ಯ, ಹಾಸನ, ಕೊಡಗು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಚಳಿಯ ವಾತಾವರಣ ಮುಂದುವರಿಯುವ ನಿರೀಕ್ಷೆಯಿದೆ.



