ನವದೆಹಲಿ: ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಳ್ಳುವ ಸಾಧ್ಯತೆ ಇದೆ. ವಾಯುಭಾರ ಕುಸಿತ ತೀವ್ರಗೊಂಡಿದ್ದು, ಹವಾಮಾನ ವ್ಯವಸ್ಥೆ ವಾಯುವ್ಯ ದಿಕ್ಕಿನತ್ತ ಚಲಿಸುತ್ತಿದೆ.
ನವೆಂಬರ್ 16ರ ವೇಳೆಗೆ ಚಂಡಮಾರುತವಾಗಿ, ನವೆಂಬರ್ 17ರ ವೇಳೆಗೆ ತೀವ್ರ ಚಂಡಮಾರುತವಾಗಿ ಬಲಗೊಳ್ಳುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿರುವುದಾಗಿ ವರದಿಯಾಗಿದೆ.
ಇದರ ಪರಿಣಾಮ ತಮಿಳುನಾಡಿನ ಉತ್ತರ ಕರಾವಳಿ ಜಿಲ್ಲೆಗಳು, ಪುದುಚೇರಿ ಮತ್ತು ಕಾರೈಕಾಲ್ ಪ್ರದೇಶಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ಪಶ್ಚಿಮ ಘಟ್ಟ ಹಾಗೂ ದಕ್ಷಿಣ ತಮಿಳುನಾಡಿನ ಕೆಲವು ಭಾಗಗಳಲ್ಲೂ ಸಾಧಾರಣ ಮಳೆಯ ಸಾಧ್ಯತೆ ಇದೆ.




