ಶ್ರೀನಗರ: ಜಮ್ಮು–ಕಾಶ್ಮೀರದ ಕುಲ್ಗಾಮ್ನಲ್ಲಿ ಭದ್ರತಾ ಪಡೆಗಳ ಕಾರ್ಯಾಚರಣೆಯಲ್ಲಿ ಇಬ್ಬರು ಲಷ್ಕರ್ ಉಗ್ರರು ಹತ್ಯೆಯಾಗಿದ್ದಾರೆ ಎಂದು ವರದಿಯಾಗಿದೆ.
ಸೇನೆ ಹಾಗೂ ಜಮ್ಮು–ಕಾಶ್ಮೀರ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಕುಲ್ಗಾಮ್ ನಿವಾಸಿ ಲತೀಫ್ ಭಟ್ ಹತ್ಯೆಯಾಗಿದ್ದು, ಮತ್ತೊಬ್ಬ ಉಗ್ರನ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ.
ಲತೀಫ್ ಭಟ್ ಸರಣಿ ಉಗ್ರ ದಾಳಿಗಳಲ್ಲಿ ಭಾಗಿಯಾಗಿದ್ದನೆಂದು ಮೂಲಗಳು ತಿಳಿಸಿವೆ.
ನವೆಂಬರ್ 11ರಂದು ಕುಲ್ಗಾಮ್ನ ಮೀರ್ ಬಜಾರ್ ಬಳಿಯ ಸಿಆರ್ಪಿಎಫ್ ಶಿಬಿರದ ಮೇಲೆ ನಡೆದ ದಾಳಿಯಲ್ಲಿ ಮೂವರು ಯೋಧರು ಗಾಯಗೊಂಡಿದ್ದರು.
ಕಳೆದ ವಾರದ ದಾಳಿಗಳ ಬೆನ್ನಲ್ಲೇ ಜಮ್ಮು–ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಗೆ ಹೈ ಅಲರ್ಟ್ ಘೋಷಿಸಲಾಗಿದೆ.




