ಬೆಂಗಳೂರು: ‘ನಾವೆಲ್ಲರೂ ಸ್ನೇಹಿತರು, ನಾವೆಲ್ಲರೂ ಭಾರತೀಯರು’ ಎಂದು ತಮಿಳುನಾಡು ಮುಖ್ಯಮಂತ್ರಿ ವಿಜಯ್ ಜೊತೆಗಿನ ಭೇಟಿಯ ಬಗ್ಗೆ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.
ದೆಹಲಿಯಲ್ಲಿ ಸೋನಿಯಾ ಗಾಂಧಿ ಅವರ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ನಡೆದ ಈ ಭೇಟಿಯ ಕುರಿತು ಹೆಚ್ಚು ಮಾತನಾಡಲು ಇಚ್ಛಿಸುವುದಿಲ್ಲ ಎಂದಿದ್ದಾರೆ.
ಕಾವೇರಿ ನೀರಿನ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಆದೇಶ ಸ್ಪಷ್ಟವಾಗಿದೆ. ತಮಿಳುನಾಡಿಗೆ 177 ಟಿಎಂಸಿ ನೀರು ಬಿಡುಗಡೆ ಮಾಡಲು ಕರ್ನಾಟಕ ಬದ್ಧವಾಗಿದ್ದು, ಅದು ನಮ್ಮ ಜವಾಬ್ದಾರಿ ಎಂದು ತಿಳಿಸಿದ್ದಾರೆ.
ಮೇಕೆದಾಟು ಯೋಜನೆ ಕುರಿತು ಬಿಜೆಪಿ ಟೀಕೆಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಡಿಕೆಶಿ, ಯೋಜನೆಯ ಬಗ್ಗೆ ಕನಿಷ್ಠ ತಿಳಿವಳಿಕೆ ಅಗತ್ಯ ಎಂದಿದ್ದಾರೆ. ಮೇಕೆದಾಟಿನಿಂದ ಮಂಡ್ಯ, ಮೈಸೂರು, ಹಾಸನ, ಬೆಂಗಳೂರು ಮಾತ್ರವಲ್ಲದೆ ತಮಿಳುನಾಡಿಗೂ ಪ್ರಯೋಜನವಾಗಲಿದೆ ಎಂದು ಹೇಳಿದ್ದಾರೆ.




