ದಕ್ಷಿಣ ಕನ್ನಡ: ಸೌಜನ್ಯ ಪ್ರಕರಣದ ತನಿಖೆಯಲ್ಲಿ ಎಸ್‌ಐಟಿ ಮತ್ತೊಂದು ಹೆಜ್ಜೆ ಇಟ್ಟಿದೆ. ಸುಪ್ರೀಂ ಕೋರ್ಟ್ ಆದೇಶದಂತೆ ಮೂವರು FSL ವೈದ್ಯರನ್ನೊಳಗೊಂಡ ಮೆಡಿಕಲ್ ಬೋರ್ಡ್ ರಚಿಸಲಾಗಿದೆ.
ಎಸ್‌ಐಟಿ ಮುಖ್ಯಸ್ಥ ಚೇತನ್ ಸಿಂಗ್ ರಾಥೋಡ್ ರಚಿಸಿರುವ ತಂಡದಲ್ಲಿ ಬೆಂಗಳೂರು, ಹಾವೇರಿ ಮತ್ತು ಬೆಳಗಾವಿಯ ವೈದ್ಯರಿದ್ದಾರೆ. ಓರ್ವ ಮಹಿಳಾ ವೈದ್ಯೆ ಹಾಗೂ ಇಬ್ಬರು ಪುರುಷ ವೈದ್ಯರು ತಂಡದಲ್ಲಿದ್ದಾರೆ.
ಇತ್ತೀಚೆಗೆ ಸೌಜನ್ಯ ಮೃತದೇಹ ಪತ್ತೆಯಾಗಿದ್ದ ಮಣ್ಣಸಂಕದ ಕಾಡಿಗೆ ಎಸ್‌ಐಟಿ ಭೇಟಿ ನೀಡಿತ್ತು. ಕುಟುಂಬಸ್ಥರು ತೋರಿಸಿದ ಸ್ಥಳದಲ್ಲಿ ಘಟನೆ ಮರುಸೃಷ್ಟಿ ನಡೆಸಲಾಗಿದ್ದು, ಸ್ಥಳ ಪರಿಶೀಲನೆಯಲ್ಲಿ FSL ಸಿಬ್ಬಂದಿಯೂ ಭಾಗಿಯಾಗಿದ್ದರು.




