Mysore
29
overcast clouds

Social Media

ಮಂಗಳವಾರ, 17 ನವೆಂಬರ್ 2026
Light
Dark

ಮಲೆ ಮಹದೇಶ್ವರ ಬೆಟ್ಟದ ರಾಜ್ಯ ಹೆದ್ದಾರಿಯಲ್ಲಿ ಅಕ್ರಮ ಶುಲ್ಕ ವಸೂಲಿ ಖಂಡಿಸಿ ರೈತರ ಬೃಹತ್ ಪ್ರತಿಭಟನೆ

ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳ ಮಲೆ ಮಹದೇಶ್ವರ ಬೆಟ್ಟದ ರಾಜ್ಯ ಹೆದ್ದಾರಿಯಲ್ಲಿ ಅಕ್ರಮವಾಗಿ ಶುಲ್ಕ ವಸೂಲಿ ಮಾಡುತ್ತಿರುವುದನ್ನು ಖಂಡಿಸಿ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ, ಮೂಲ ಸಿದ್ದಾಂತದಡಿ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಗೌಡೇಗೌಡ ಅವರ ನೇತೃತ್ವದಲ್ಲಿ ಮಲೆ ಮಹದೇಶ್ವರ ಬೆಟ್ಟದ ಕೊಳ್ಳೇಗಾಲ ಮುಖ್ಯ ರಸ್ತೆಯ ಸುಂಕ ವಸೂಲಿ ಕೇಂದ್ರದ ಮುಂಭಾಗ ರಸ್ತೆ ತಡೆ ನಡೆಸಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

ನಂತರ ಗೌಡೇಗೌಡ ಮಾತನಾಡಿ ಮಲೆ ಮಹದೇಶ್ವರ ಬೆಟ್ಟಕ್ಕೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಹಾಗೂ ವಿವಿಧ ರಾಜ್ಯಗಳಿಂದ ಲಕ್ಷಾಂತರ ಮಂದಿ ಭಕ್ತಾದಿಗಳು ಮಹದೇಶ್ವರ ಸ್ವಾಮಿಯ ದರ್ಶನಕ್ಕೆ ಆಗಮಿಸುತ್ತಿದ್ದಾರೆ. ಆದರೆ ಪ್ರಾಧಿಕಾರವು ಬರುವ ಭಕ್ತಾದಿಗಳಿಂದ ರಾಜ್ಯ ಹೆದ್ದಾರಿಗೆ ಅಕ್ರಮವಾಗಿ ಶುಲ್ಕ ವಸೂಲಿ ಮಾಡಿ ಭಕ್ತರಿಗೆ ಹೊರೆ ಹಾಕುತ್ತಿದೆ. ಈ ರಸ್ತೆಯು ಲೋಕೋಪಯೋಗಿ ಇಲಾಖೆಯ ವ್ಯಾಪ್ತಿಯಲ್ಲಿದೆಯೋ ಅಥವಾ ಪ್ರಾಧಿಕಾರದ ವಶದಲ್ಲಿದೆಯೋ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ರೈತರು ಶ್ರೀ ಕ್ಷೇತ್ರಕ್ಕೆ ಬರುವ ಭಕ್ತಾದಿಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ತಾವು ಬೆಳೆದ ತರಕಾರಿ, ಹಣ್ಣು, ದವಸ-ಧಾನ್ಯಗಳನ್ನು ಹರಕೆ ರೂಪದಲ್ಲಿ ಮಲೆ ಮಹದೇಶ್ವರ ಬೆಟ್ಟಕ್ಕೆ ನೀಡುತ್ತಿದ್ದಾರೆ. ಆದರೆ ಪ್ರಾಧಿಕಾರದ ವತಿಯಿಂದ ಯಾವುದಕ್ಕೂ ರಸೀದಿ ನೀಡುತ್ತಿಲ್ಲ. ಇದುವರೆಗೂ ಭಕ್ತಾದಿಗಳು ಎಷ್ಟು ಕಾಣಿಕೆ ನೀಡಿದ್ದಾರೆ, ಅದನ್ನು ಎಲ್ಲಿ ವಿನಿಯೋಗಿಸಲಾಗುತ್ತಿದೆ ಎಂಬುದರ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಸಿಗುತ್ತಿಲ್ಲ. ಈ ಸಂಬಂಧ ಪ್ರಾಧಿಕಾರವು ಎಲ್ಲಾ ಪ್ರಶ್ನೆಗಳಿಗೆ ಸ್ಪಷ್ಟೀಕರಣ ನೀಡಬೇಕು ಎಂದರು

Tags:
error: Content is protected !!