Mysore
30
broken clouds

Social Media

ಗುರುವಾರ, 19 ನವೆಂಬರ್ 2026
Light
Dark

ಚುನಾವಣೆಯಲ್ಲಿ ಭಾಗವಹಿಸಿಯೇ ಮತದಾರರ ಹಕ್ಕಿಗಾಗಿ ಹೋರಾಟ ಮುಂದುವರಿಸುತ್ತೇವೆ ಎಂದ ರಾಹುಲ್ ಗಾಂಧಿ

rahulgandhi

ನವದೆಹಲಿ: ಚುನಾವಣೆಯನ್ನು ಬಹಿಷ್ಕರಿಸುವುದಿಲ್ಲ. ಚುನಾವಣೆಯಲ್ಲಿ ಭಾಗವಹಿಸಿಯೇ ಮತದಾರರ ಹಕ್ಕುಗಳಿಗಾಗಿ ಹೋರಾಟ ಮುಂದುವರಿಸುತ್ತೇವೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಅಮೆರಿಕದ ಚಿಕಾಗೋ ವಿಶ್ವವಿದ್ಯಾಲಯದಲ್ಲಿ ನಡೆದ ಸಂವಾದದಲ್ಲಿ ಮಾತನಾಡಿದ ಅವರು, ಚುನಾವಣೆಯಿಂದ ಹಿಂದೆ ಸರಿದರೆ ಪ್ರಜಾಪ್ರಭುತ್ವದ ಹಕ್ಕುಗಳಿಗಾಗಿ ನಡೆಯುತ್ತಿರುವ ಹೋರಾಟಕ್ಕೆ ಹಿನ್ನಡೆಯಾಗುತ್ತದೆ ಎಂದರು.

ಮತದಾರರ ಪಟ್ಟಿಯಲ್ಲಿನ ಲೋಪಗಳು ಮತ್ತು ಮತದಾನ ಪ್ರಕ್ರಿಯೆಯಲ್ಲಿನ ಅಕ್ರಮಗಳ ಕುರಿತ ಆರೋಪಗಳನ್ನು ಜನರ ಮುಂದಿಡುವುದಾಗಿ ಅವರು ತಿಳಿಸಿದರು. ಚುನಾವಣಾ ಪ್ರಕ್ರಿಯೆಯ ಪಾರದರ್ಶಕತೆ ಕಾಪಾಡುವುದೇ ಈ ಹೋರಾಟದ ಉದ್ದೇಶ ಎಂದರು.

Tags:
error: Content is protected !!