Mysore
18
clear sky

Social Media

ಶುಕ್ರವಾರ, 20 ನವೆಂಬರ್ 2026
Light
Dark

ವ್ಯಕ್ತಿ ಮೇಲೆ ಕಾಡುಕೋಣ ದಾಳಿ : ಸಾವು

ಮಂಡ್ಯ : ಹಸು ಮೇಯಿಸಲು ಆರಣ್ಯದಂಚಿಗೆ ತೆರಳಿದ್ದ ವೃದ್ಧರೊಬ್ಬರ ಮೇಲೆ ಕಾಡುಕೋಣ ಏಕಾಏಕಿ ದಾಳಿ ನಡೆಸಿದ ಪರಿಣಾ ಮ ಅವರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಮರಿಜೋಗಿದೊಡ್ಡಿ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ನಡೆದಿದೆ.

ಮಾಸ್ಟರ್ ದೊಡ್ಡಿ ಗ್ರಾಮದ ನಿವಾಸಿ ಸಿದ್ದೇಗೌಡ (60) ಮೃತ ದುರ್ದೈವಿ.

ಎಂದಿನಂತೆ ಮರಿಜೋಗಿದೊಡ್ಡಿ ಗ್ರಾಮದ ಹೊರವಲಯಕ್ಕೆ ಹಸುಗಳನ್ನು ಮೇಯಿಸಲು ತೆರಳಿದ್ದ ವೇಳೆ ಏಕಾಏಕಿ ಎದುರಾದ ಕಾಡುಕೋಣ ತಿವಿದಿದ್ದು, ಗಂಭೀರವಾಗಿ ಗಾಯಗೊಂಡ ಸಿದ್ದೇಗೌಡ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮಳವಳ್ಳಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಈ ಭಾಗದಲ್ಲಿ ಇತ್ತೀಚೆಗೆ ಕಾಡುಪ್ರಾಣಿಗಳ ಹಾವಳಿ ಹೆಚ್ಚಾಗುತ್ತಿರುವುದರಿಂದ ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ತೀವ್ರ ಆತಂಕ ಮನೆಮಾಡಿದೆ. ಜನರ ಜೀವ ಹಾಗೂ ಜಾನುವಾರುಗಳ ರಕ್ಷಣೆಗೆ ಅರಣ್ಯ ಇಲಾಖೆ ತಕ್ಷಣವೇ ಆಗತ್ಯ ಕ್ರಮ ಕೈಗೊಳ್ಳಬೇಕು ಮತ್ತು ಮೃತ ಸಿದ್ದೇಗೌಡ ಅವರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಘಟನೆ ಸಂಬಂಧ ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Tags:
error: Content is protected !!