ಢಾಕಾ: ಬಾಂಗ್ಲಾದೇಶದಲ್ಲಿ ಮತ್ತೆ ರಾಜಕೀಯ ಉದ್ವಿಗ್ನತೆ ಭುಗಿಲೆದ್ದಿದೆ. ಅವಾಮಿ ಲೀಗ್ ಕರೆ ನೀಡಿದ್ದ ಪ್ರತಿಭಟನೆಗೂ ಮುನ್ನ ನಡೆದ ಘರ್ಷಣೆಗಳಲ್ಲಿ ನಾಲ್ವರು ಮೃತಪಟ್ಟಿದ್ದಾರೆ.
ಚಿತ್ತಗಾಂಗ್‌ನಲ್ಲಿರುವ ಮಾಜಿ ಮಧ್ಯಂತರ ಸರ್ಕಾರದ ಮುಖ್ಯಸ್ಥ ಮುಹಮ್ಮದ್ ಯೂನಸ್ ಅವರ ಪೈತೃಕ ಮನೆಗೆ ಅಪರಿಚಿತರು ಬೆಂಕಿ ಹಚ್ಚಿದ್ದಾರೆ. ಸಿಲ್ಹೆಟ್, ರಾಜ್‌ಶಾಹಿ ಸೇರಿದಂತೆ ಹಲವು ಭಾಗಗಳಲ್ಲಿ ಗ್ರಾಮೀಣ್ ಬ್ಯಾಂಕ್ ಶಾಖೆಗಳ ಮೇಲೂ ಬೆಂಕಿ ಹಚ್ಚುವ ದಾಳಿಗಳು ನಡೆದಿವೆ ಎಂದು ವರದಿಯಾಗಿದೆ.
ಎರಡು ದಿನಗಳಲ್ಲಿ ದೇಶದ 28 ಜಿಲ್ಲೆಗಳಲ್ಲಿ ಹಿಂಸಾಚಾರ ವರದಿಯಾಗಿದೆ. ರಾಜಧಾನಿ ಢಾಕಾದಲ್ಲಿ ಸ್ಫೋಟಗಳು ಸಂಭವಿಸಿದ್ದು, ಹಲವು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಪ್ರತಿಭಟನೆಗೂ ಮುನ್ನ ಪೊಲೀಸರು ನಡೆಸಿದ 24 ಗಂಟೆಗಳ ಕಾರ್ಯಾಚರಣೆಯಲ್ಲಿ 565 ಮಂದಿಯನ್ನು ಬಂಧಿಸಲಾಗಿದೆ. ಬಂಧಿತರಲ್ಲಿ ಮಾಜಿ ಶಿಕ್ಷಣ ಸಚಿವ ನೂರುಲ್ ಇಸ್ಲಾಂ ನಾಹಿದ್ ಕೂಡ ಸೇರಿದ್ದಾರೆ.




