Mysore
25
mist

Social Media

ಶನಿವಾರ, 21 ನವೆಂಬರ್ 2026
Light
Dark

ಓದುಗರ ಪತ್ರ: ಹೆಚ್ಚುತ್ತಿರುವ ಕಾಡಾನೆ ದಾಳಿ: ಮುನ್ನೆಚ್ಚರಿಕೆ ಕ್ರಮ ಅಗತ್ಯ

ಓದುಗರ ಪತ್ರ

ರೈತರು ತಮ್ಮ ಹೊಲಗದ್ದೆ ಹಾಗೂ ತೋಟಗಳಲ್ಲಿ ಕೃಷಿ ಕಾರ್ಯಕ್ಕೆ ತೆರಳುವಾಗ ಇಲ್ಲವೇ ಮನೆಗೆ ಮರಳುವಾಗ ಕಾಡಾನೆಗಳ ದಾಳಿಗೆ ತುತ್ತಾಗುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ.

ಇತ್ತೀಚೆಗೆ ಇಂತಹ ದುರಂತಗಳು ಜಾಸ್ತಿಯಾಗುತ್ತಿರುವುದು ಕಳವಳ ಮೂಡಿಸುವಂತಹದ್ದಾಗಿದೆ. ಕಾಡು ಪ್ರಾಣಿಗಳು ಆಹಾರ ಮತ್ತು ನೀರಿನ ಹುಡುಕಾಟದಲ್ಲಿ ನಾಡಿನತ್ತ ಬರುತ್ತಿವೆ. ಇದರಿಂದ ರೈತರ ಜೀವ ಹಾಗೂ ಬೆಳೆಗಳಿಗೆ ಅಪಾಯ ಉಂಟಾಗುತ್ತಿದೆ.

ಇಂತಹ ಘಟನೆಗಳು ಮರು ಕಳಿಸದಂತೆ ಅರಣ್ಯ ಇಲಾಖೆ ಹಾಗೂ ಸರ್ಕಾರ ಎಚ್ಚರ ವಹಿಸುವುದು ಅಗತ್ಯವಾಗಿದೆ. ಜತೆಗೆ ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವುದು ಸರ್ಕಾರದ ಜವಾಬ್ದಾರಿಯಾಗಿದೆ.

ಕಾಡಾನೆಗಳ ಸಂಚಾರ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಕಾಡಾನೆಗಳ ಚಲನವಲನ ತಿಳಿಸಲು ಗ್ರಾಮಗಳಲ್ಲಿ ಎಚ್ಚರಿಕೆ ವ್ಯವಸ್ಥೆ ಮತ್ತು ಮಾಹಿತಿ ಕೇಂದ್ರಗಳನ್ನು ಸ್ಥಾಪಿಸಬೇಕು. ಕಾಡಾನೆಗಳು ನಾಡಿಗೆ ಬರದಂತೆ ವೈಜ್ಞಾನಿಕವಾಗಿ ರೈಲ್ವೆ ಬ್ಯಾರಿಕೇಡ್ ಹಾಗೂ ಸೌರಬೇಲಿಗಳನ್ನು ನಿರ್ಮಿಸಬೇಕು.

ಅರಣ್ಯ ಪ್ರದೇಶಗಳಲ್ಲಿ ನೀರು ಮತ್ತು ಆಹಾರದ ಲಭ್ಯತೆಯನ್ನು ಹೆಚ್ಚಿಸಬೇಕು. ಕಾಡಾನೆ ದಾಳಿಯಿಂದ ಮೃತಪಟ್ಟ ರೈತರ ಕುಟುಂಬಗಳಿಗೆ ತಕ್ಷಣ ಸೂಕ್ತ ಪರಿಹಾರ ನೀಡಿ, ಕುಟುಂಬದ ಒಬ್ಬರಿಗೆ ಉದ್ಯೋಗಾವಕಾಶ ಕಲ್ಪಿಸಬೇಕು.

– ಹರಳಹಳ್ಳಿ ಪುಟ್ಟರಾಜು, ಪಾಂಡವಪುರ

Tags:
error: Content is protected !!