Mysore
31
few clouds

Social Media

ಶನಿವಾರ, 21 ನವೆಂಬರ್ 2026
Light
Dark

ಪ್ರಯಾಣಿಕನಿಗೆ ಎದೆನೋವು: ಆಸ್ಪತ್ರೆಗೆ ಕರೆದೊಯ್ದು KSRTC ಬಸ್ ಚಾಲಕನ ಸಮಯಪ್ರಜ್ಞೆಗೆ ಮೆಚ್ಚುಗೆ

ಸೋಮವಾರಪೇಟೆ: ಸೋಮವಾರಪೇಟೆ–ಮೈಸೂರು–ಬೆಂಗಳೂರು ಮಾರ್ಗವಾಗಿ ತೆರಳುತ್ತಿದ್ದ ಸರ್ಕಾರಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರಿಗೆ ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸಮಯಪ್ರಜ್ಞೆ ಮೆರೆದ ಕೆಎಸ್‌ಆರ್‌ಟಿಸಿ ಬಸ್ ಚಾಲಕ, ತಕ್ಷಣ ಬಸ್ ಅನ್ನು ವಾಪಸ್ ತಿರುಗಿಸಿ ಪ್ರಯಾಣಿಕನನ್ನು ಸೋಮವಾರಪೇಟೆ ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ದ ಘಟನೆ ನಡೆದಿದೆ.

ಪ್ರಯಾಣಿಕನ ಆರೋಗ್ಯದ ಬಗ್ಗೆ ಕಾಳಜಿ ವಹಿಸಿದ ಚಾಲಕ, ಯಾವುದೇ ವಿಳಂಬ ಮಾಡದೆ ಆಸ್ಪತ್ರೆಗೆ ಕರೆದೊಯ್ದು ಮಾನವೀಯತೆ ಮೆರೆದಿದ್ದಾರೆ. ಚಾಲಕನ ಸಮಯಪ್ರಜ್ಞೆ ಹಾಗೂ ಮಾನವೀಯ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

Tags:
error: Content is protected !!