Mysore
30
few clouds

Social Media

ಸೋಮವಾರ, 23 ನವೆಂಬರ್ 2026
Light
Dark

‘ಬಾಯಿಮಾತಿನ ಅನುಕಂಪ ಸಾಕಾಗಲ್ಲ’ ಆಶಾ ಕಾರ್ಯಕರ್ತೆಯರ ಪರ ಕುಮಾರಸ್ವಾಮಿ ಆಗ್ರಹ!

 ಬೆಂಗಳೂರು: ‘ಡಿಕೆ ಶಿವಕುಮಾರ್‌ ಅವರದ್ದು ಬಂಡೆ ಹೃದಯವಲ್ಲ, ಹೂವಿನ ಹೃದಯ. ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸುತ್ತಾರೆ’ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಒಂದು ವಾರದಿಂದ ಪ್ರತಿಭಟನೆ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರ ಶ್ರಮಕ್ಕೆ ಕೇವಲ ಬಾಯಿಮಾತಿನ ಅನುಕಂಪ ಸಾಕಾಗುವುದಿಲ್ಲ. ಅವರ ಬೇಡಿಕೆ ಈಡೇರಿಸುವುದು ನಮ್ಮೆಲ್ಲರ ಕರ್ತವ್ಯ ಎಂದಿದ್ದಾರೆ.

ತಿಂಗಳಿಗೆ ಏಳೆಂಟು ಸಾವಿರ ರೂಪಾಯಿಯಿಂದ ಬದುಕು ಸಾಗಿಸುವುದು ಕಷ್ಟ. ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದ್ದಂತೆ ಗೌರವಧನವನ್ನು ₹15 ಸಾವಿರಕ್ಕೆ ಹೆಚ್ಚಿಸಬೇಕು ಎಂದು ಆಗ್ರಹಿಸಿದ್ದಾರೆ.

‘ಭಾರತ್‌ ಜೋಡೋ ಸಂಘಕ್ಕೆ ಸಾವಿರ ಕೋಟಿ ರೂಪಾಯಿ ಘೋಷಿಸಿದ ಮುಖ್ಯಮಂತ್ರಿಗಳಿಗೆ ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸುವುದು ಯಾವ ಲೆಕ್ಕ?’ ಎಂದು ಪ್ರಶ್ನಿಸಿದ್ದಾರೆ.

ಚಳಿಯಲ್ಲಿ ಮಕ್ಕಳೊಂದಿಗೆ ಧರಣಿ ನಡೆಸುತ್ತಿರುವ ಕಾರ್ಯಕರ್ತೆಯರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸಬೇಕು. ಜಪಾನ್‌ ಪ್ರವಾಸದಿಂದ ಮರಳಿದ ಕೂಡಲೇ ಮುಖ್ಯಮಂತ್ರಿಗಳು ಬೇಡಿಕೆ ಈಡೇರಿಸುತ್ತಾರೆ ಎಂಬುದು ತಮ್ಮ ಅಭಿಪ್ರಾಯ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

Tags:
error: Content is protected !!