Mysore
30
clear sky

Social Media

ಸೋಮವಾರ, 23 ನವೆಂಬರ್ 2026
Light
Dark

ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದರ್ಶನ್‌ ಮನವಿ; ಅರ್ಜಿ ವಿಚಾರಣೆ ಬುಧವಾರಕ್ಕೆ ಮುಂದೂಡಿಕೆ!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್‌, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಅನುಮತಿ ಕೋರಿ ನ್ಯಾಯಾಲಯಕ್ಕೆ ಹೊಸ ಅರ್ಜಿ ಸಲ್ಲಿಸಿದ್ದಾರೆ.

ಜೈಲಿನ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ದೊರೆಯುತ್ತಿಲ್ಲ. ಈವರೆಗೆ ಕೇವಲ ಮೂರು ಬಾರಿ ಫಿಸಿಯೋಥೆರಪಿ ನೀಡಲಾಗಿದ್ದು, ನೋವು ಕಡಿಮೆಯಾಗಿಲ್ಲ ಎಂದು ದರ್ಶನ್‌ ಪರ ವಕೀಲರು ಅರ್ಜಿಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಚಿಕಿತ್ಸೆಗಾಗಿ ವಿಶೇಷ ಸೌಲಭ್ಯಗಳಿರುವ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲು ಅವಕಾಶ ನೀಡಬೇಕು ಎಂದು ವಕೀಲ ಹಷ್ಮತ್‌ ಪಾಷಾ ಮನವಿ ಮಾಡಿದ್ದಾರೆ. ಆರೋಗ್ಯದ ವಿಚಾರವಾಗಿರುವುದರಿಂದ ಅರ್ಜಿಯನ್ನು ತುರ್ತಾಗಿ ವಿಚಾರಣೆ ನಡೆಸುವಂತೆಯೂ ಕೋರಿದ್ದಾರೆ.

ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ಬುಧವಾರಕ್ಕೆ ಮುಂದೂಡಿದೆ. ವಿಶೇಷ ಸಾರ್ವಜನಿಕ ಅಭಿಯೋಜಕರು ಆಕ್ಷೇಪಣೆ ಸಲ್ಲಿಸಿದ ಬಳಿಕ ಮುಂದಿನ ವಿಚಾರಣೆ ನಡೆಯಲಿದೆ.

Tags:
error: Content is protected !!