Mysore
29
light rain

Social Media

ಮಂಗಳವಾರ, 24 ನವೆಂಬರ್ 2026
Light
Dark

ದೇವರ ದರ್ಶನಕ್ಕೆ ಹೊರಟವರ ಬಾಳಲ್ಲಿ ದುರಂತ: ದಶಪಥ ಹೆದ್ದಾರಿ ಅಪಘಾತದಲ್ಲಿ ಬಾಲಕಿ ಸೇರಿ ಇಬ್ಬರು ಬಲಿ!

ಶ್ರೀರಂಗಪಟ್ಟಣ: ನಂಜನಗೂಡಿನ ದೇವಸ್ಥಾನಕ್ಕೆ ಹೊರಟಿದ್ದ ಎರಡು ಕುಟುಂಬಗಳ ಪ್ರಯಾಣ ದುರಂತದಲ್ಲಿ ಅಂತ್ಯಗೊಂಡಿದೆ.

ಮೈಸೂರು–ಬೆಂಗಳೂರು ದಶಪಥ ಹೆದ್ದಾರಿಯಲ್ಲಿ ಮುಂದೆ ಸಾಗುತ್ತಿದ್ದ ಸರಕು ಸಾಗಣೆ ಲಾರಿಗೆ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದು, ಬಾಲಕಿ ಸೇರಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಶ್ರೀರಂಗಪಟ್ಟಣ ತಾಲೂಕಿನ ನಗುವನಹಳ್ಳಿ ಗೇಟ್‌ ಬಳಿಯ ಫ್ಲೈಓವರ್‌ ಮೇಲೆ ಅಪಘಾತ ಸಂಭವಿಸಿದೆ. ಗುತ್ತಲು ಬಡಾವಣೆಯ ಮಹದೇವು, 49 ವರ್ಷ ಹಾಗೂ ತೈಲೂರು ಗ್ರಾಮದ ಎಂಟು ವರ್ಷದ ರಿತ್ವಿಕಾ ಮೃತರು.

ಗೌರಿ, ಲತಾ, ಶಿವರಾಜು ಹಾಗೂ ಪ್ರಾರ್ಥವ್ಯ ಗಂಭೀರವಾಗಿ ಗಾಯಗೊಂಡಿದ್ದಾರೆ.

ಪ್ರಯಾಣದ ದೃಶ್ಯಗಳನ್ನು ಕುಟುಂಬದವರು ರೀಲ್ಸ್‌ ಮಾಡಿ ವಾಟ್ಸ್‌ಆ್ಯಪ್‌ ಸ್ಟೇಟಸ್‌ನಲ್ಲಿ ಹಂಚಿಕೊಂಡಿದ್ದರು ಎನ್ನಲಾಗಿದೆ. ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

 

Tags:
error: Content is protected !!