ಬೆಂಗಳೂರು: ಕಾಡಿನಂಚಿನ ಗ್ರಾಮಗಳಲ್ಲಿ ಹೆಚ್ಚುತ್ತಿರುವ ಆನೆ–ಮಾನವ ಸಂಘರ್ಷಕ್ಕೆ ಆನೆಧಾಮ ಸ್ಥಾಪನೆಯಿಂದ ಪರಿಹಾರ ಕಂಡುಕೊಳ್ಳಬಹುದು ಎಂದು ಸಚಿವ ಈಶ್ವರ್ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ.
ವಿಕಾಸಸೌಧದಲ್ಲಿ ಮಾತನಾಡಿದ ಅವರು, ತಾವು ಅರಣ್ಯ ಸಚಿವರಾಗಿದ್ದಾಗಲೇ ಈ ಯೋಜನೆ ರೂಪಿಸಿದ್ದಾಗಿ ತಿಳಿಸಿದ್ದಾರೆ. ಆದರೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಅವಕಾಶ ನೀಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಪ್ರಸ್ತಾವ ತಿರಸ್ಕರಿಸಿತ್ತು ಎಂದಿದ್ದಾರೆ.
ತೋಟಗಳಲ್ಲೇ ಹುಟ್ಟಿ ಬೆಳೆಯುವ ಆನೆಗಳನ್ನು ಆನೆಧಾಮದಲ್ಲಿ ಇರಿಸಿದರೆ ಸಮಸ್ಯೆ ನಿಯಂತ್ರಿಸಬಹುದು ಎಂದು ಹೇಳಿದ್ದಾರೆ. ಈ ಕುರಿತು ಮುಖ್ಯಮಂತ್ರಿಗಳು ಸಭೆ ನಡೆಸಲಿದ್ದು, ಪರಿಹಾರ ಒದಗಿಸುವ ವಿಶ್ವಾಸವಿದೆ ಎಂದಿದ್ದಾರೆ.




